ಬುಧವಾರ, ಮೇ 25, 2022
29 °C

ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ: ಬಾಲಚಂದ್ರ ಜಾರಕಿಹೊಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಸಚಿವ ಉಮೇಶ ಕತ್ತಿ ನೇತೃತ್ವದಲ್ಲಿ ಇಲ್ಲಿ ರಹಸ್ಯವಾಗಿ ನಡೆದ ಸಭೆ ಕುರಿತಂತೆ ಅರಭಾವಿ ಶಾಸಕರೂ ಆಗಿರುವ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

‘ಜಿಲ್ಲೆಯ ಕೆಲವು ಬಿಜೆಪಿ ಮುಖಂಡರು ಸಭೆ ಸೇರಿರುವ ಕುರಿತು ಗಮನಿಸಿದ್ದೇನೆ. ಉದ್ಧೇಶಪೂರ್ವಕವಾಗಿ ಯಾರನ್ನೂ ಹೊರಗಿಟ್ಟು ಸಭೆ ನಡೆಸುವ ಅಗತ್ಯವಿರಲಿಲ್ಲ. ಅಲ್ಲದೇ ಅದು ಬಿಜೆಪಿಯ ಅಧಿಕೃತ ಸಭೆಯೂ ಅಲ್ಲ. ಹೀಗಾಗಿ ಹೆಚ್ಚಿನ ಮಹತ್ವ ನೀಡುವ ಅಗತ್ಯವೂ ಇಲ್ಲ’ ಎಂದು ಹೇಳಿದ್ದಾರೆ.

‘ಜಿಲ್ಲೆಯಲ್ಲಿ ಪಕ್ಷಕ್ಕಾಗಿ ಯಾರು, ಎಷ್ಟು ದುಡಿಯುತ್ತಿದ್ದಾರೆ ಎನ್ನುವುದು ವರಿಷ್ಠರಿಗೆ ಗೊತ್ತಿದೆ. ದಿನಕ್ಕೊಬ್ಬರಂತೆ ಸಭೆ ನಡೆಸುತ್ತಾ ಹೋದರೆ ಅದಕ್ಕೆಲ್ಲ ಉತ್ತರ ನೀಡಲು ಆಗುವುದಿಲ್ಲ. 2008ರಿಂದ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡುತ್ತಿದ್ದೇನೆ. ಜಿಲ್ಲೆಯಲ್ಲಿ ಪಕ್ಷ ಬಲವರ್ಧನೆಗೊಳಿಸಲು ಎಲ್ಲ ರೀತಿಯ ಪ್ರಯತ್ನವನ್ನೂ ಮಾಡಿದ್ದೇನೆ. ಎಲ್ಲ ಚಟುವಟಿಕೆಗಳನ್ನೂ ಪಕ್ಷದ ವರಿಷ್ಠರು ಸೂಕ್ಷ್ಮವಾಗಿ  ಗಮನಿಸುತ್ತಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು