ಗುರುವಾರ , ಆಗಸ್ಟ್ 5, 2021
21 °C

ಸಮತೋಲನದಿಂದ ಕೂಡಿದ ಸಚಿವ ಸಂಪುಟ: ಎಂ.ಬಿ. ಝಿರಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಮತೋಲನದಿಂದ ಕೂಡಿದೆ’ ಎಂದು ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ ಹೇಳಿದರು.

ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಪುಟದಲ್ಲಿ ರಾಜ್ಯದ ಇನ್ನೂ ನಾಲ್ವರಿಗೆ ಸ್ಥಾನ ಕಲ್ಪಿಸಲಾಗಿದೆ. ದೇಶದ ಹಲವೆಡೆಯ ಹೊಸಬರನ್ನೂ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಬಹುತೇಕರು ಉನ್ನತ ಶಿಕ್ಷಣ ಪಡೆದವರಾಗಿದ್ದಾರೆ. ಎಲ್ಲ ಜಾತಿ, ವರ್ಗಗಳಿಗೂ ಪ್ರಾತಿನಿಧ್ಯ ಕೊಡಲಾಗಿದೆ’ ಎಂದು ತಿಳಿಸಿದರು.

‘ಮಹಿಳೆಯರಿಗೆ ಹೆಚ್ಚಿನ ಪ್ರಾಧಾನ್ಯತೆ ಕೊಡಲಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ ಅವರ ಚಿಂತನೆಯಂತೆ ಹಿಂದುಳಿದ ವರ್ಗಗಳಿಗೂ ಆದ್ಯತೆ ನೀಡಲಾಗಿದೆ. 12 ಪರಿಶಿಷ್ಟ ಜಾತಿ, 8 ಪರಿಶಿಷ್ಟ ಪಂಗಡದವರು, 28 ಮಂದಿ ಹಿಂದುಳಿದ ವರ್ಗಗಳವರು, ಐವರು ಅಲ್ಪಸಂಖ್ಯಾತರಿಗೆ ಅವಕಾಶ ಸಿಕ್ಕಿದೆ. ಇದೊಂದು ಉತ್ತಮ ಸಚಿವ ಸಂಪುಟವಾಗಿದೆ’ ಎಂದರು.

ಸಂಸದೆ ಮಂಗಲಾ ಸುರೇಶ ಅಂಗಡಿ, ಬಿಜೆಪಿ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ, ಶಾಸಕ ಅನಿಲ ಬೆನಕೆ, ಜಿಲ್ಲಾ ಘಟಕದ ವಕ್ತಾರ ಹನುಮಂತ ಕೊಂಗಾಲಿ, ಮಾಧ್ಯಮ ಸಂಚಾಲಕ ಶರದ್ ಪಾಟೀಲ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.