ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಯಕ್ಕ, ಹೊಳೆಮ್ಮ ದೇವಿ ದೇವಸ್ಥಾನ: ಸಾರ್ವಜನಿಕ ದರ್ಶನ ನಿಷೇಧ

Last Updated 9 ಜುಲೈ 2021, 12:09 IST
ಅಕ್ಷರ ಗಾತ್ರ

ಬೆಳಗಾವಿ: ಕೋವಿಡ್ -19 ಮತ್ತು ಡೆಲ್ಟಾ ಪ್ಲಸ್ ವೈರಾಣುವಿನ ಹರಡುವಿಕೆ ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ರಾಯಬಾಗ ತಾಲ್ಲೂಕಿನ ಚಿಂಚಲಿ ಗ್ರಾಮದ ಮಾಯಕ್ಕದೇವಿ ದೇವಸ್ಥಾನ ಹಾಗೂ ಹುಕ್ಕೇರಿ ತಾಲ್ಲೂಕಿನ ಬಡಕುಂದ್ರಿ ಗ್ರಾಮದ ಹೊಳೆಮ್ಮದೇವಿ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ನೆರೆಯ ಮಹಾರಾಷ್ಟ್ರದಲ್ಲಿ ಸೋಂಕು ತೀವ್ರವಾಗಿ ಹರಡುತ್ತಿದೆ. ಜಿಲ್ಲೆಯ ಹಲವು ಪ್ರಮುಖ ಧಾರ್ಮಿಕ ಕೇಂದ್ರಗಳಿಗೆ ಅಲ್ಲಿಂದ ಸಾರ್ವಜನಿಕರು ಹಾಗೂ ಭಕ್ತರು ಬರುವ ಸಾಧ್ಯತೆ ಇರುತ್ತದೆ. ಆದ್ದರಿಂದ ಎಲ್ಲರ ಆರೋಗ್ಯದ ಹಿತದೃಷ್ಟಿಯಿಂದ ವೈರಾಣುವಿನ ಹರಡುವಿಕೆ ನಿಯಂತ್ರಿಸುವುದು ಅತ್ಯಂತ ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಲ್ಲಿ ಕ್ರಮ ವಹಿಸಲಾಗಿದೆ. ಈ ದೇವಸ್ಥಾನಗಳ ಸುತ್ತಮುತ್ತಲಿನ ಪ್ರದೇಶದಲ್ಲಿನ ಅಂಗಡಿಗಳನ್ನು ತೆರೆಯುವುದನ್ನೂ ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಆಡಳಿತ ಮಂಡಳಿಯವರು ದೇವಸ್ಥಾನಗಳಲ್ಲಿ ದಿನ ನಿತ್ಯದ ಸಂಪ್ರದಾಯದಂತೆ ಧಾರ್ಮಿಕ ವಿಧಿವಿಧಾನಗಳನ್ನು ಮುಂಜಾಗ್ರತಾ ಕ್ರಮ ವಹಿಸಿ ನಡೆಸಲು ವಿನಾಯಿತಿ ನೀಡಲಾಗಿದೆ. ಈ ಆದೇಶ ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ 188ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಹೊರಟ್ಟಿ ಪ್ರವಾಸ 13ರಂದು

ಬೆಳಗಾವಿ: ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಜುಲೈ 13ರಂದು ಬೆಳಿಗ್ಗೆ 11.45ಕ್ಕೆ ಆಟೊನಗರದಲ್ಲಿರುವ ರಾಜ್ಯ ಸಹಕಾರಿ ಬ್ಯಾಂಕ್‌ಗಳ ಮಹಾಮಂಡಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT