ಗುರುವಾರ , ಮಾರ್ಚ್ 4, 2021
18 °C
ಹಿಂದೂ ಜನಜಾಗೃತಿ ಸಮಿತಿ ಆಗ್ರಹ

‘ಪ್ಲಾಸ್ಟಿಕ್‌ ಧ್ವಜ್‌ ಬಳಕೆ ನಿಷೇಧಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ಲಾ‌ಸ್ಟಿಕ್ ಹಾಗೂ ಕಾಗದದ ರಾಷ್ಟ್ರಧ್ವಜಗಳ ಬಳಕೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಸದಸ್ಯರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.    

‘ಪ್ರತಿ ವರ್ಷ ಸ್ವಾತಂತ್ರ್ಯ ದಿನ ಆಚರಣೆಯಲ್ಲಿ ಮಕ್ಕಳು ಹಾಗೂ ಯುವಕರು ಕಾಗದ ಮತ್ತು ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಹಿಡಿದು ಪಾಲ್ಗೊಳ್ಳುತ್ತಾರೆ. ನಂತರ ಅವುಗಳನ್ನು ಎಲ್ಲೆಂದರಲ್ಲಿ ಎಸೆಯುತ್ತಾರೆ. ಇದರಿಂದ ರಸ್ತೆ, ಚರಂಡಿ ಸೇರಿ ಎಲ್ಲೆಂದರಲ್ಲಿ ರಾಷ್ಟ್ರಧ್ವಜದ ಬಾವುಟಗಳು ಬಿದ್ದು, ಅಗೌರವ ಉಂಟಾಗುತ್ತಿದೆ’ ಎಂದು ಸದಸ್ಯರು ಅಸಮಾದಾನ ವ್ಯಕ್ತಪಡಿಸಿದರು.

ಪ್ಲಾಸ್ಟಿಕ್ ಹಾಗೂ ಕಾಗದದ ಧ್ವಜಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ಪೊಲೀಸ್‌ ಅಧಿಕಾರಿಗಳು ಪ್ಲಾಸ್ಟಿಕ್ ಧ್ವಜ್ ತಯಾರಕರು ಹಾಗೂ ಮಾರಾಟಗಾರರ ಮೇಲೆ ದಾಳಿ ನಡೆಸಿ, ಧ್ವಜ್‌ಗಳನ್ನು ವಶಪಡಿಸಿಕೊಳ್ಳಬೇಕು. ರಾಷ್ಟ್ರಧ್ವಜದ ಗೌರವ ಕಾಪಾಡಬೇಕು’ ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಸದಸ್ಯರಾದ ಶ್ರೀಪಾದ ದೇಶಪಾಂಡೆ, ಗಜಾನನ ಗಾರೇಕರ, ಶ್ರೀಕಾಂತ ದೇಶಪಾಂಡೆ, ಅಕ್ಕಾತಾಯಿ ಸುತಾರ, ಮಿಲನ ಪವಾರ, ಶಿವ ಕದಂ ಇದ್ದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.