ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಶತಮಾನೋತ್ಸವ ಕಾರ್ಯಕ್ರಮ ಸಂಪನ್ನ

Published 19 ಮೇ 2024, 16:28 IST
Last Updated 19 ಮೇ 2024, 16:28 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಖಾಸಬಾಗದ ಉಪ್ಪಾರ ಗಲ್ಲಿಯಲ್ಲಿ ನಾಲ್ಕು ದಿನ ವೈಭವದಿಂದ ನಡೆದ ಬನಶಂಕರಿ ದೇವಸ್ಥಾನದ ಶತಮಾನೋತ್ಸವ ಕಾರ್ಯಕ್ರಮ ಭಾನುವಾರ ಸಂಪನ್ನಗೊಂಡಿತು.

ಜಾತ್ರೆಯ ಕೊನೆಯ ದಿನ ಬೆಳಿಗ್ಗೆ ಮಹಾಕುಂಭಾಭಿಷೇಕ, ದೀಪಾರಾಧನೆ, ಮಹಾಮಂಗಳಾರತಿ ಧಾರ್ಮಿಕ ಕಾರ್ಯಕ್ರಮ ನೆರವೇರಿದವು. ಸಾವಿರಾರು ಭಕ್ತರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಜಿಲ್ಲೆಯ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಬಂದಿದ್ದ ಭಕ್ತರು ಸರದಿ ಸಾಲಿನಲ್ಲಿ ನಿಂತು, ಬನಶಂಕರಿ ದೇವಿ ದರ್ಶನಾಶೀರ್ವಾದ ಪಡೆದುಕೊಂಡರು. ತಮ್ಮ ಇಷ್ಟಾರ್ಥ ಈಡೇರಿದ್ದರಿಂದ ಕೆಲವರು ದೇವಿಗೆ ಸೀರೆ, ಚಿನ್ನಾಭರಣ ಮತ್ತಿತರ ಕಾಣಿಕೆಗಳನ್ನು ಅರ್ಪಿಸಿ ಭಕ್ತಿ ಮೆರೆದರು. ಸರ್ವಧರ್ಮೀಯರು ಜಾತ್ರೆಯಲ್ಲಿ ಭಾಗವಹಿಸಿದ್ದು ಭಾವೈಕ್ಯತೆಗೆ ಸಾಕ್ಷಿಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT