ಬಂದ್: ಬೆಳಗಾವಿ ಜಿಲ್ಲೆಯ ಶಾಲಾ– ಕಾಲೇಜುಗಳಿಗೆ ರಜೆ, ಜನಜೀವನ ಅಸ್ತವ್ಯಸ್ಥ ಸಂಭವ?

ಬೆಳಗಾವಿ: ತೈಲ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ದೇಶದಾದ್ಯಂತ ಸೋಮವಾರ ಕರೆ ನೀಡಿರುವ ಬಂದ್ಗೆ ನಗರದಲ್ಲಿಯೂ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಜನಜೀವನ ಅಸ್ತವ್ಯಸ್ಥವಾಗುವ ಸಂಭವವಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಶಾಲಾ– ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಘಟಕ, ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿಗಳ ಸಂಘಟನೆ (ಎಐಡಿಎಸ್ಒ), ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ), ಜನರಲ್ ಆಟೊ ಚಾಲಕರು ಹಾಗೂ ಮಾಲೀಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಬಂದ್ಗೆ ಬೆಂಬಲ ನೀಡಿವೆ.
ಆಟೊಗಳು, ಖಾಸಗಿ ಸಾರಿಗೆ ವಾಹನಗಳ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ. ಹೋಟೆಲ್, ಪೆಟ್ರೋಲ್ ಬಂಕ್ ಹಾಗೂ ಅಂಗಡಿ ಮುಂಗಟ್ಟುಗಳು ಬಂದ್ ಆಗುವ ಸಂಭವವಿದೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಆಟೊಗಳ ಸಂಚಾರವನ್ನು ಸ್ಥಗಿತಗೊಳಿಸುವ ಮೂಲಕ ಬಂದ್ಗೆ ಬೆಂಬಲ ನೀಡುವುದಾಗಿ ಆಟೊ ಚಾಲಕರ ಸಂಘದ ಬೆಳಗಾವಿ ಘಟಕದ ಅಧ್ಯಕ್ಷ ಬಿ.ಮನ್ಸೂರ ತಿಳಿಸಿದ್ದಾರೆ.
ತೀರ್ಮಾನ ಮಾಡಿಲ್ಲ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್. ಮುಂಜಿ ಮಾತನಾಡಿ, ‘ಎಂದಿನಂತೆ ನಾವು ಬೆಳಿಗ್ಗೆ ಬಸ್ಗಳನ್ನು ಓಡಿಸುತ್ತೇವೆ. ಎಲ್ಲಿಯಾದರೂ ತೊಂದರೆಯಾದರೆ, ಬಸ್ಗಳ ಸಂಚಾರವನ್ನು ಸ್ಥಗಿತಗೊಳಿಸುತ್ತೇವೆ’ ಎಂದು ಹೇಳಿದರು.
ಪೆಟ್ರೋಲ್ ಬಂಕ್ ಬಂದ್?
ನಗರದಲ್ಲಿರುವ ಪೆಟ್ರೋಲ್ ಬಂಕ್ಗಳು ಸೋಮವಾರ ಬಂದ್ ಆಗಬಹುದು ಎನ್ನುವ ಆತಂಕದಲ್ಲಿ ಭಾನುವಾರ ಸಂಜೆಯೇ ವಾಹನ ಚಾಲಕರು ತೈಲ ತುಂಬಿಸಿಕೊಂಡರು. ಬಂಕ್ನಲ್ಲಿ ರಾತ್ರಿಯವರೆಗೂ ಉದ್ದನೆಯ ಸರದಿ ಸಾಲು ಕಂಡುಬಂದಿತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.