ಸೋಮವಾರ, ಜನವರಿ 25, 2021
14 °C

ಬೆಳಗಾವಿ: ಬಸ್ ಸಂಚಾರ ಖಂಡಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿಯಲ್ಲಿ ಪ್ರತಿಭಟನೆ

ಬೆಳಗಾವಿ: ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಲಾಗಿದ್ದರೂ ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ಬಸ್‌ಗಳ ಕಾರ್ಯಾಚರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾ ಘಟಕದವರು ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಸೋಮವಾರ ಪ್ರತಿಭಟಿಸಿದರು.

ರೈತರ ಹಿತ ಕಾಯುವುದಕ್ಕೋಸ್ಕರ ನಡೆಯುತ್ತಿರುವ ಹೋರಾಟವನ್ನು ಎಲ್ಲರೂ ಬೆಂಬಲಿಸಬೇಕು ಎಂದು ಕೋರಿದರು.

ಅಂಗಡಿಗಳನ್ನು ಬಂದ್ ಮಾಡುವಂತೆ ಕೋರಿದರು. ಬೆಂಬಲ ಕೊಡುವಂತೆ ಆಟೊರಿಕ್ಷಾ ಚಾಲಕರನ್ನು ಕೋರಿದರು.

'ಸದ್ಯಕ್ಕೆ ಪೊಲೀಸ್ ಭದ್ರತೆಯಲ್ಲಿ ಬಸ್‌ಗಳ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಯಾವ ಮಾರ್ಗದ ಬಸ್ ಬಹುತೇಕ ತುಂಬುತ್ತದೆಯೋ ಅದನ್ನು ಕಳುಹಿಸಲಾಗುತ್ತಿದೆ' ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್. ಮುಂಜಿ 'ಪ್ರಜಾವಾಣಿ'ಗೆ ತಿಳಿಸಿದರು.

ಮಾನವ ಸರಪಳಿ ರಚಿಸಿ ಪ್ರತಿಭಟನೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಹಳೇ ಬಸ್ ನಿಲ್ದಾಣದ ಬಳಿ ಹತ್ತಿರ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಕರ್ನಾಟಕ ಬಂದ್ ಬೆಂಬಲಿಸಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು. 
ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಮಾನವ ಸರಪಳಿ ರಚಿಸಿ ಪ್ರತಿಭಟನೆ

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು