ಅಥಣಿ (ಬೆಳಗಾವಿ ಜಿಲ್ಲೆ): ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ ಸಚಿವ ಪ್ರಿಯಾಂಕ್ ನಿಜವಾದ ದಲಿತರಾಗಿದ್ದರೆ, ಕಾಂಗ್ರೆಸ್‌ನಲ್ಲಿ ಇರುತ್ತಿರಲಿಲ್ಲ’ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಮಹಾರಾಷ್ಟ್ರದ ಜತ್ ತಾಲ್ಲೂಕಿನ ಬಿಳ್ಳೂರಿನಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು,‘ಡಾ. ಅಂಬೇಡ್ಕರ್ ಅವರ ಅಂತ್ಯಕ್ರಿಯೆಗೆ ಕಾಂಗ್ರೆಸ್‌ನವರು ವಿಮಾನ ವ್ಯವಸ್ಥೆ ಮಾಡಲಿಲ್ಲ. ಅವರಿಗೆ ಅನ್ಯಾಯ ಮಾಡಿದರು’ ಎಂದರು.

‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಮಾಜಿ ಸಚಿವ ಮುರುಗೇಶ ನಿರಾಣಿ ಸೇರಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಯತ್ನಿಸಿದರು. ತಲಾ ₹3 ಕೋಟಿ ಹಣ ಕಳುಹಿಸಿದ್ದರು. ಸಂಚು ರೂಪಿಸಿದವರೇ ಈಗ ಸೋತು ಸುಣ್ಣವಾಗಿದ್ದಾರೆ’ ಎಂದು ಕುಟುಕಿದರು.

‘ನಾನು ಮುಖ್ಯಮಂತ್ರಿ ಆಗುವುದನ್ನು ಬಿ.ಎಸ್.ಯಡಿಯೂರಪ್ಪ ತಪ್ಪಿಸಲು ಯತ್ನಿಸುತ್ತಿದ್ದಾರೆ. ತಮ್ಮ ಮಗನನ್ನು ಮುಖ್ಯಮಂತ್ರಿ ಮಾಡಲು ಪ್ರಯತ್ನ ನಡೆಸಿದ್ದಾರೆ. ಅದಕ್ಕಾಗಿ ನನ್ನನ್ನು ಪಕ್ಷದಿಂದ ಹೊರಹಾಕುವಂತೆ ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ. ಆದರೆ, ಅದು ಅವರಿಂದ ಸಾಧ್ಯವಾಗುತ್ತಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.