ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್ ಪರ ಘೋಷಣೆ: ರಾಜ್ಯದ ಕೆಲ ಸಚಿವರ ನಡೆ ಆತಂಕಕಾರಿ– ಬಸವರಾಜ ಬೊಮ್ಮಾಯಿ

Published 5 ಮಾರ್ಚ್ 2024, 6:47 IST
Last Updated 5 ಮಾರ್ಚ್ 2024, 6:47 IST
ಅಕ್ಷರ ಗಾತ್ರ

ಬೆಳಗಾವಿ: 'ರಾಜ್ಯದಲ್ಲಿ ಕೆಲ ಸಚಿವರ ನಡೆ ಆತಂಕಕ್ಕೆ ಕಾರಣವಾಗಿದೆ. ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ದೇಶದ್ರೋಹಿಗಳ ಪರವಾಗಿ ಇವರು ನಿಂತಿದ್ದು ದುರ್ದೈವದ ಸಂಗತಿ' ಎಂದು ಶಾಸಕ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಜವಾಬ್ದಾರಿ ಮರೆತು ಕೆಲ ಸಚಿವರು ದೇಶದ್ರೋಹಿಗಳ ಪರ ನಿಂತಿರುವುದು ದುರ್ದೈವದ ಸಂಗತಿ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದು ನಾಲ್ಕು ದಿನ ಕಳೆದಿದೆ. ಎರಡು ದಿನಗಳ ಹಿಂದೆ ಎನ್.ಐ.ಎ ಎಫ್ಐಆರ್ ಮಾಡಿಕೊಂಡಿದ್ದಕ್ಕೆ ಮೂವರ ಬಂಧನವಾಗಿದೆ. ಮಾಧ್ಯಮಗಳೇ ಇದನ್ನು ಪ್ರಚೋದಿಸುತ್ತಿವೆ ಎಂದು ಸರ್ಕಾರ ದೂರಿತ್ತು. ಈಗ ಸತ್ಯ ಬಯಲಾಗಿದೆ. ಪಾಕ್ ಪರ ಘೋಷಣೆ ಕೂಗಿದವರ ಸಮರ್ಥನೆ ಮಾಡಿಕೊಂಡವರು ಕ್ಷಮೆ ಕೇಳಬೇಕು' ಎಂದು ಒತ್ತಾಯಿಸಿದರು.

ಅಥಣಿಯ ಅಮ್ಮಾಜೇಶ್ವರಿ ಏತನೀರಾವರಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಬಾರಿಗೆ ಶಂಕುಸ್ಥಾಪನೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, 'ಸರ್ಕಾರ ಬಂದು 9 ತಿಂಗಳು ಕಳೆದರೂ ಯಾವುದೇ ಹೊಸ ಯೋಜನೆ ರೂಪಿಸಿಲ್ಲ. ನೀರಾವರಿ ಯೋಜನೆಗಳನ್ನು ನಿರ್ಲಕ್ಷ್ಯ ಮಾಡಿದೆ. ಹಳೆಯ ಯೋಜನೆಗೆ ಮತ್ತೆ ಚಾಲನೆ ನೀಡುತ್ತಿದ್ದಾರೆ. ಅಧಿಕಾರಿಗಳು ಮಂತ್ರಿಗಳನ್ನು ದಾರಿ‌ ತಪ್ಪಿಸುತ್ತಿದ್ದಾರೆ. ಸಿ.ಎಂ ಇದನ್ನು ಪರಿಶೀಲಿಸಿ ಕ್ರಮ ವಹಿಸಬೇಕು' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT