ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿ

Last Updated 21 ಆಗಸ್ಟ್ 2021, 9:45 IST
ಅಕ್ಷರ ಗಾತ್ರ

ಬೆಳಗಾವಿ: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ್ದಾರೆ.

ಸುವರ್ಣ ವಿಧಾನಸೌಧದ ಹೆಲಿಪ್ಯಾಡ್‌ಗೆ ಬಂದಿಳಿಸ ಅವರನ್ನು ಪಕ್ಷದ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಬರಮಾಡಿಕೊಂಡರು. ಇದರೊಂದಿಗೆ ಈ ಹೆಲಿಪ್ಯಾಡ್ ಹಲವು ವರ್ಷಗಳ‌ ನಂತರ ಬಳಕೆ ಆದಂತಾಯಿತು.

ಶಾಸಕರಾದ ಅಭಯ ಪಾಟೀಲ ಹಾಗೂ ಅನಿಲ ಬೆನಕೆ ಮುಖ್ಯಮಂತ್ರಿಯನ್ನು ಬರಮಾಡಿಕೊಂಡರು.

ನಂತರ ಗೌರವ ವಂದನೆ ಸ್ವೀಕರಿಸಿದ ಮುಖ್ಯಮಂತ್ರಿ, ರೈತ ಹೋರಾಟಗಾರರು ಮತ್ತು ಕನ್ನಡ ಪರ ಹೋರಾಟಗಾರರಿಂದ ಮನವಿ ಸ್ವೀಕರಿಸಿದರು.

ನೆರೆ ಪರಿಹಾರ ಹಾಗೂ ಕೋವಿಡ್ ನಿರ್ವಹಣೆ ಕುರಿತು ಅವರು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT