ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಪಶ್ಚಿಮ ಶಿಕ್ಷಕರ ಮತಕ್ಷೇತ್ರದಲ್ಲಿ ಹೊರಟ್ಟಿ ಮುನ್ನಡೆ

Last Updated 15 ಜೂನ್ 2022, 6:49 IST
ಅಕ್ಷರ ಗಾತ್ರ

ಬೆಳಗಾವಿ: ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಮತಕ್ಷೇತ್ರ ಚುನಾವಣೆಯ ಮತ ಎಣಿಕೆಯ ಮೊದಲ ಸುತ್ತು ಮುಕ್ತಾಯಗೊಂಡಿದ್ದು ಬಿಜೆಪಿಯ ಬಸವರಾಜ ಹೊರಟ್ಟಿ 6479 ಮತಗಳನ್ನು ಪಡೆದು ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮೊದಲ ಸುತ್ತಿನಲ್ಲಿ ಒಟ್ಟು 11 ಸಾವಿರ ಮತಗಳ ಎಣಿಕೆ ಕಾರ್ಯ ಪೂರ್ಣಗೊಂಡಿತು. ಇದರಲ್ಲಿ ಕಾಂಗ್ರೆಸ್‌ನ ಬಸವರಾಜ ಗುರಿಕಾರ 3200 ಮತಗಳನ್ನು ಪಡೆದಿದ್ದಾರೆ. 962 ಮತಗಳು ಅನರ್ಹಗೊಂಡಿವೆ.

ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿಗೆ ಬಿದ್ದ ಮತಗಳಲ್ಲಿ ಕುಲಗೆಟ್ಟ ಮತಗಳ ಸಂಖ್ಯೆ ಹೆಚ್ಚಳವಾಗಿದೆ. ಹಿಗಾಗಿ ಒತ್ತಡದಲ್ಲಿರುವ ಹೊರಟ್ಟಿ ಮತ ಎಣಿಕೆ ಕೊಠಡಿಯಿಂದ ಆಗಾಗ ಹೊರಬಂದು ಹೋಗುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT