ಬೆಳಗಾವಿ: ‘ವಿಧಾನಸಭೆ ಚುನಾವಣೆ ನೀತಿಸಂಹಿತೆ ಜಾರಿಯಾಗುವ ಮುನ್ನ, ಸರ್ಕಾರ ಮೀಸಲಾತಿ ವಿಚಾರವಾಗಿ ನಮಗೆ ಸಿಹಿ ಸುದ್ದಿ ಕೊಡಬೇಕು. ಇಲ್ಲದಿದ್ದರೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ’ ಎಂದು ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಕೆ.ಪಾಟೀಲ ಎಚ್ಚರಿಸಿದರು.
ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೇಡಿಕೆ ಈಡೇರಿಕೆಗಾಗಿ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹೋರಾಟ ಮಾಡುತ್ತಿದ್ದಾರೆ. ಕೊನೆಯ ಸಚಿವ ಸಂಪುಟ ಸಭೆಯಲ್ಲಿ ನಮಗೆ ಮೀಸಲಾತಿ ಘೋಷಿಸಲೇಬೇಕು. ಇಲ್ಲದಿದ್ದರೆ ಶ್ರೀಗಳ ನಿರ್ಧಾರದಂತೆ ಮುಂದುವರಿಯುತ್ತೇವೆ’ ಎಂದರು.
‘ಬೆಳಗಾವಿ ಉತ್ತರ ಕ್ಷೇತ್ರದ ಟಿಕೆಟ್ ನೀಡುವಾಗ, ಎಲ್ಲ ರಾಜಕೀಯ ಪಕ್ಷಗಳು ಲಿಂಗಾಯತ ಸಮುದಾಯಕ್ಕೆ ಆದ್ಯತೆ ಕೊಡಬೇಕು’ ಎಂದು ಆಗ್ರಹಿಸಿದರು. ಗುಂಡು ಪಾಟೀಲ ಇತರರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.