ಭಾನುವಾರ, ಫೆಬ್ರವರಿ 23, 2020
19 °C

ಶೌಚಾಲಯದ ಹಣ ಗುಳುಂ: ಪಿಡಿಒ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಳಗಾವಿ: ‘ಶೌಚಾಲಯ ನಿರ್ಮಿಸಿದ್ದಾಗಿ ದಾಖಲೆಗಳನ್ನು ಸೃಷ್ಟಿಸಿ ಹಣ ಗುಳುಂ ಮಾಡಿದ ಹಿನ್ನೆಲೆಯಲ್ಲಿ ರಾಯಬಾಗ ತಾಲ್ಲೂಕು ಬೆಕ್ಕೇರಿಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಸದಾಶಿವ ಕರಗಾರ ಅವರನ್ನು ಅಮಾನತುಗೊಳಿಸಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ತಿಳಿಸಿದರು.

‘ಅವರು ಪುತ್ರ ಹಾಗೂ ಇತರ ಐವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಎಸಗಿದ್ದಾರೆ. ಶೌಚಾಲಯ ನಿರ್ಮಿಸಿದೆಯೇ ಅನುದಾನ ಮಂಜೂರು ಮಾಡಿದ್ದಾರೆ. ಈ ಬಗ್ಗೆ ಸ್ಥಳೀಯರು ದೂರು ನೀಡಿದ್ದರು. ಅದನ್ನು ಪರಿಶೀಲಿಸಿದಾಗ ಪಿಡಿಒ ತಪ್ಪೆಸಗಿರುವುದು ಕಂಡುಬಂದಿದೆ. ಹೀಗಾಗಿ, ಶಿಸ್ತುಕ್ರಮ ಜರುಗಿಸಲಾಗಿದೆ. ಪಿಡಿಒ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಕೂಡ ದಾಖಲಿಸಲಾಗುವುದು’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು