ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ: ಶಂಕಿತ ಇಲಿ ಜ್ವರದಿಂದ ಬಾಲಕ ಸಾವು

Published 25 ಜೂನ್ 2024, 15:52 IST
Last Updated 25 ಜೂನ್ 2024, 15:52 IST
ಅಕ್ಷರ ಗಾತ್ರ

ಬೆಳಗಾವಿ: ಶಂಕಿತ ಇಲಿ ಜ್ವರದಿಂದ ಬಳಲುತ್ತಿದ್ದ ಬಾಲಕನೊಬ್ಬ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾನೆ.

ತಾಲ್ಲೂಕಿನ ಗೋಜಗೆ ಗ್ರಾಮದ ಗಣೇಶ ಜಂಗಮ (14) ಮೃತ ಬಾಲಕ.

‘ಶಂಕಿತ ಇಲಿಜ್ವರ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಬಾಲಕನನ್ನು ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಬಾಲಕನಿಗೆ ಡೆಂಗಿ ಕಾಣಿಸಿಕೊಂಡಿಲ್ಲ. ಇನ್ನಷ್ಟು ಪರಿಶೀಲನೆ ಬಳಿಕ ಪೂರ್ಣ ವಿವರ ಗೊತ್ತಾಗಲಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಯ ಡುಮ್ಮಗೋಳ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT