ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್ ಉಲ್ಲಂಘನೆ: ಬೆಳಗಾವಿಯಲ್ಲಿ 485 ದ್ವಿಚಕ್ರವಾಹನ ಜಪ್ತಿ

Last Updated 31 ಮಾರ್ಚ್ 2020, 10:23 IST
ಅಕ್ಷರ ಗಾತ್ರ

ಬೆಳಗಾವಿ: ಕೊರೊನಾ ವೈರಾಣು ಸೋಂಕು‌ ಹರಡುವುದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಜಾರಿಗೊಳಿಸಲಾಗಿರುವ ಲಾಕ್ ಡೌನ್ ಉಲ್ಲಂಘಿಸಿ ‌ರಸ್ತೆಗಿಳಿದವರಿಂದ ಜಿಲ್ಲೆಯಾದ್ಯಂತ 485 ದ್ವಿಚಕ್ರವಾಹನಗಳನ್ನು ಜಪ್ತಿ ಮಾಡಲಾಗಿದೆ.

ಈ ಪೈಕಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದ 49 ವಾಹನಗಳು ಸೇರಿವೆ. ಈ ಮೂಲಕ ಅನವಶ್ಯವಾಗಿ ವಾಹನಗಳಲ್ಲಿ ಓಡಾಡುವವರಿಗೆ ಪೊಲೀಸರು ಬಿಸಿ ಮುಟ್ಟಿಸಲು ಆರಂಭಿಸಿದ್ದಾರೆ. ಇನ್ನೊಂದೆಡೆ ಲಾಕ್ ಡೌನ್ ಬಗ್ಗೆ ಅರಿವು ಮೂಡಿಸುವ ಚಟುವಟಿಕೆಗಳನ್ನೂ ನಡೆಸುತ್ತಿದ್ದಾರೆ.

ಸುಳ್ಳು ಸುದ್ದಿ ಹರಡಿದ್ದು ಹಾಗೂ ಅನಧಿಕೃತವಾಗಿ ಓಡಾಟ ಮಾಡಿದ್ದು ಸೇರಿದಂತೆ ವಿವಿಧ ಪ್ರಕರಣದಲ್ಲಿ 65 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT