ಬೆಳಗಾವಿ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ರಾಣಿ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸಂಚಾರ ಬಂದ್ ಮಾಡಿದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.

ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಚಿಲ್ಲರೆ ಹಣ ಮೀಸಲಿಟ್ಟಿದ್ದಾರೆ. ಇದು ಯುವ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಕಳೆದ ಮೂರು ವರ್ಷಗಳಿಂದ ವಿದ್ಯಾರ್ಥಿಗಳ ಸ್ಥಿತಿ ಶೋಚನೀಯವಾಗಿದೆ ಎಂದು ಘೋಷಣೆ ಮೊಳಗಿಸಿದರು.

ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಿ ಅಧಿಕಾರಕ್ಕೆ ಬಂದ ಸರ್ಕಾರ, ಕಳೆದ ಮೂರು ವರ್ಷಗಳಿಂದ ಯಾವುದೇ ನೇಮಕಾತಿ ಮಾಡದೆ ಮೋಸ ಮಾಡಿದೆ. ರಾಜ್ಯದಲ್ಲಿ ಒಟ್ಟು 43 ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ ಇವೆ. ಲಕ್ಷಾಂತರ ಅಭ್ಯರ್ಥಿಗಳು ಕಳೆದ ಐದಾರು ವರ್ಷಗಳಿಂದ ನೇಮಕಾತಿ ಮಾಡುತ್ತದೆ ಎಂಬ ನಂಬಿಕೆಯೊಂದಿಗೆ ಪ್ರತಿ ತಿಂಗಳು ಖರ್ಚು ಮಾಡಿಕೊಂಡು ತರಬೇತಿ ಪಡೆಯುತ್ತಿದ್ದಾರೆ ಎಂದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಲ್ಲಿ 79,694 ಹುದ್ದೆಗಳು, ಉನ್ನತ ಶಿಕ್ಷಣ ಇಲಾಖೆಯಲ್ಲಿ 13,599 ಹುದ್ದೆಗಳು ಖಾಲಿ ಇವೆ. ಇದರಿಂದ ರಾಜ್ಯದಲ್ಲಿ ಶಿಕ್ಷಣವೂ ಸರಿಯಾಗಿ ನಡೆಯುತ್ತಿಲ್ಲ ಎಂಬುದು ಗೊತ್ತಾಗುತ್ತದೆ. ವಿಶ್ವವಿದ್ಯಾಲಯಗಳ ಸ್ಥಿತಿ ಇನ್ನೂ ಶೋಚನೀಯವಾಗಿದೆ. ಉನ್ನತ ಶಿಕ್ಷಣಕ್ಕೆ ಹೆಸರುವಾಸಿಯಾಗಿದ್ದ ಕರ್ನಾಟಕ ಈಗ ಹಿನ್ನಡೆ ಕಂಡಿದೆ. ಹಿಂದಿನ ಸರ್ಕಾರ ಸ್ಥಾಪಿಸಿದ್ದ 9 ವಿಶ್ವವಿದ್ಯಾಲಯಗಳು ಮುಚ್ವುವ ಹಂತ ತಲುಪಿವೆ. ಇದಕ್ಕೆ ರಾಜ್ಯ ಸರ್ಕಾರದ ನಡೆಯೇ ಕಾರಣ ಎಂದು ಆಕ್ರೋಶ ಹೊರಹಾಕಿದರು.

ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಹಿಂದಿನ ಸರ್ಕಾರಗಳು ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದವು. ಈ ಸರ್ಕಾರ ಅದನ್ನೂ ಸಮರ್ಪಕವಾಗಿ ನೀಡುತ್ತಿಲ್ಲ. ಇದರಿಂದ ಶಿಕ್ಷಣ ಅರ್ಧಕ್ಕೆ ಮೊಟಕುಗೊಳ್ಳುತ್ತಿದೆ ಎಂದೂ ದೂರಿದರು.

ಗಂಟೆಗಟ್ಟಲೆ ಧರಣಿ ನಡೆಸಿದ ಹಾಗೂ ರಾಜ್ಯ ಸರ್ಕಾರದ ಆದೇಶಗಳ ಪ್ರತಿಗೆ ಹೋರಾಟಗಾರರು ಬೆಂಕಿ ಹಚ್ಚಿದರು. ಮಧ್ಯ ಪ್ರವೇಶ ಮಾಡಿದ ಪೊಲೀಸರು ಮುಖಂಡರನ್ನು ಹೊತ್ತುಕೊಂಡು ಹೋಗಿ ಪೊಲೀಸ್ ವಾಹನಗಳಲ್ಲಿ ಹಾಕಿ ಕರೆದೊಯ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260318-21-453060478

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.