ಬುಧವಾರ, ಜುಲೈ 28, 2021
25 °C

ಬೆಳಗಾವಿ: ಸಹಾಯಕ ಕಂಟ್ರೋಲ್‌ರ ನಿವಾಸದ ಮೇಲೆ ಎಸಿಬಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಳಗಾವಿ: ಇಲ್ಲಿನ ಅಳತೆ, ತೂಕ ಮತ್ತು ಮಾಪನಾ ಇಲಾಖೆಯ ಸಹಾಯಕ ಕಂಟ್ರೋಲ್‌ರ ಸುಭಾಷ ಉಪ್ಪಾರ ಅವರ ಮನೆ, ಕಚೇರಿಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಮಂಗಳವಾರ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ.

 ಇಲ್ಲಿನ ರುಕ್ಮಿಣಿ ನಗರದಲ್ಲಿರುವ ಅವರ ಮನೆ, ಸ್ವಗ್ರಾಮವಾದ ಬಸವನ ಕುಡಚಿಯಲ್ಲಿರುವ ಮನೆ, ಸಂಬಂಧಿಕರ ಮನೆ ಹಾಗೂ ಕಚೇರಿ ಸೇರಿದಂತೆ ನಾಲ್ಕು ಕಡೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸಂಗ್ರಹಿಸುತ್ತಿದ್ದಾರೆ.

ಎಸ್ಪಿ ಬಿ.ಎಸ್. ನೇಮಗೌಡರ ನೇತೃತ್ವದಲ್ಲಿ ಡಿಎಸ್ಪಿ ಶರಣಪ್ಪ ಸೇರಿದಂತೆ ಏಳು ಜನ ಪೊಲೀಸ್ ಇನ್‌ಸ್ಪೆಕ್ಟರ್ ಹಾಗೂ 25 ಜನ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು