ಬೆಳಗಾವಿ: ‘ಅಂಬೇಡ್ಕರ್ ಅವರ ತತ್ವ, ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು’ ಎಂದು ಉಪಮೇಯರ್ ಹನುಮಂತ ಕೊಂಗಾಲಿ ಹೇಳಿದರು.

ಇಲ್ಲಿನ ಅಂಬೇಡ್ಕರ್ ಉದ್ಯಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಬಡವರು ಮತ್ತು ಹಿಂದುಳಿದ ಸಮುದಾಯದವರ ಉನ್ನತಿಗಾಗಿ ಅಂಬೇಡ್ಕರ್ ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಸಮಾಜ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ’ ಎಂದರು.

ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ, ‘ದೇಶಕ್ಕೆ ಸಂವಿಧಾನ, ಸಾಮಾಜಿಕ ನ್ಯಾಯ ಒದಗಿಸಿದ ಶ್ರೇಯ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ’ ಎಂದು ಹೇಳಿದರು.

ಪ್ರೊ.ಬಸವರಾಜ ಜಾಲವಾದಿ ಉಪನ್ಯಾಸ ನೀಡಿದರು.

ಚಿತ್ರದುರ್ಗದ ಛಲವಾದಿ ಪೀಠದ ಬಸವನಾಗಿದೇವಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಸಮಾಜ ಕಲ್ಯಾಣ ಇಲಾಖೆ ಜಂಟಿನಿರ್ದೇಶಕ ರಾಮನಗೌಡ ಕನ್ನೋಳಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಸವರಾಜ ಕುರಿಹುಲಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಚನ್ನಯನವರ, ಮುಖಂಡರಾದ ಮಲ್ಲೇಶ ಚೌಗಲೆ, ಮಲ್ಲೇಶಿ ಕುರಂಗಿ, ನಾಗೇಶ ಕಾಂಬಳೆ, ಸಿದ್ದರಾಯ ಮೇತ್ರಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರಾಯವ್ವಗೋಳ ಇದ್ದರು.

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳು ಹಾಗೂ ವಿವಿಧ ಸಾಧಕರನ್ನು ಇದೇವೇಳೆ ಸನ್ಮಾನಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-21-776923246

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.