ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಕ್ಷೌರಿಕರಿಗೆ ಪರಿಹಾರ ಧನ: ಅರ್ಜಿ ಆಹ್ವಾನ

Last Updated 11 ಜೂನ್ 2020, 13:49 IST
ಅಕ್ಷರ ಗಾತ್ರ

ಬೆಳಗಾವಿ: ಕ್ಷೌರಿಕ ಮತ್ತು ಅಗಸ ವೃತ್ತಿ ನಿರ್ವಹಿಸುತ್ತಿರುವ 18ರಿಂದ 65 ವರ್ಷದೊಳಗಿನ ಹಾಗೂ ಬಡತನ ರೇಖೆಗಿಂತ ಕೆಳಗಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ₹ 5ಸಾವಿರ ಪರಿಹಾರಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕೋವಿಡ್-19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸರ್ಕಾರ ಈ ನೆರವು ನೀಡುತ್ತಿದೆ.

ಫಲಾನುಭವಿಗಳು ಕಾರ್ಯನಿರ್ವಹಿಸುತ್ತಿರುವ ವ್ಯಾಪ್ತಿಯ ಸೇವಾ ಸಿಂಧು ಕೇಂದ್ರದ ಸೇವಾ ಸಿಂಧು ಪೋರ್ಟಲ್‌ನಲ್ಲಿ ನಿಗದಿತ ಅರ್ಜಿಯಲ್ಲಿ ಮಾಹಿತಿ ಭರ್ತಿ ಮಾಡಬೇಕು. ಬ್ಯಾಂಕ್ ಖಾತೆಯೊಂದಿಗೆ ಜೋಡಣೆಯಾದ ಆಧಾರ್‌ ಕಾರ್ಡ್‌, ವಿಳಾಸ ದೃಢೀಕರಣದ ಪಡಿತರ ಚೀಟಿ/ಎಪಿಕ್‌ ಕಾರ್ಡ್‌, ಮೊಬೈಲ್ ಸಂಖ್ಯೆ, ಸ್ವಯಂ ಘೋಷಣಾಪತ್ರ, ಉದ್ಯೋಗ ಪ್ರಮಾಣಪತ್ರ ಹಾಗೂ ಭಾವಚಿತ್ರವನ್ನು ಅಪ್‌ಲೋಡ್‌ ಮಾಡಬೇಕು.

ಉದ್ಯೋಗ ಪ್ರಮಾಣಪತ್ರ, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಯ ಕಂದಾಯ ಅಧಿಕಾರಿ ಅಥವಾ ಕಂದಾಯ ನಿರೀಕ್ಷಕರು, ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್‌, ಉಪತಹಶೀಲ್ದಾರ್‌, ಕಂದಾಯ ನಿರೀಕ್ಷಕರು, ಕಂದಾಯ ಅಧಿಕಾರಿಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಿಡಿಒ, ಕಾರ್ಯದರ್ಶಿ, ಕಾರ್ಮಿಕ ಇಲಾಖೆಯ ನಿರೀಕ್ಷಕರು, ಕಾರ್ಮಿಕ ಅಧಿಕಾರಿಗಳು, ಸಹಾಯಕ ಕಾರ್ಮಿಕ ಆಯುಕ್ತರಲ್ಲಿ ಯಾರದರೊಬ್ಬರಿಂದ ದೃಢೀಕರಿಸಿ ಮೂಲ ಪ್ರತಿಯನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಬೇಕು.

ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಂದಿ ವೃತ್ತಿಯಲ್ಲಿ ತೊಡಗಿದ್ದಲ್ಲಿ ಒಬ್ಬರು ಮಾತ್ರ ಪರಿಹಾರ ಪಡೆಯಲು ಅರ್ಹರಾಗಿರುತ್ತಾರೆ ಎಂದು ಉಪ ಕಾರ್ಮಿಕ ಆಯುಕ್ತ ವೆಂಕಟೇಶ ಶಿಂದಿಹಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT