ಬೆಳಗಾವಿ: ‘ಬೆಳಗಾವಿ ಜಿಲ್ಲೆಯ ಏಕೈಕ ಮುಸ್ಲಿಂ ಶಾಸಕ ಆಸಿಫ್ ಸೇಠ್ ಅವರಿಗೆ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು’ ಎಂದು ಕಿತ್ತೂರು ಕರ್ನಾಟಕದ ವಿವಿಧ ಮುಸ್ಲಿಂ ಜಮಾತ್ಗಳ ಮುಖಂಡರು ಆಗ್ರಹಿಸಿದರು.

ಇಲ್ಲಿನ ಅಂಜುಮನ್–ಎ–ಇಸ್ಲಾಂ ಸಂಸ್ಥೆಯಲ್ಲಿ ಮಂಗಳವಾರ ಸಭೆ ನಡೆಸಿದ ನಂತರ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಲಾಲಸಾಬ್ ಸಿದ್ದಾಪುರ, ಮೌಲಾಸಾಬ್ ಎಂ., ಇರ್ಫಾನ್ ತರಾಡೆ, ಸಲೀಮ್ ಪಟೇಲ್, ‘ಕಳೆದ 20 ವರ್ಷಗಳಿಂದ ಉತ್ತರ ಕರ್ನಾಟಕದ ಮುಸ್ಲಿಂ ನಾಯಕರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಈ ಸಲವೂ ಸಚಿವ ಸ್ಥಾನ ನೀಡದಿದ್ದರೆ ಅನ್ಯಾಯವಾಗುತ್ತದೆ. ಹೊಸ ಸಂಪುಟದಲ್ಲಿ ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ನೀಡಬೇಕು’ ಎಂದು ಒತ್ತಾಯಿಸಿದರು.

‘ಆಸಿಫ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಲು ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ವರಿಷ್ಠರ ಬಳಿ ಎರಡು ದಿನಗಳಲ್ಲಿ ನಿಯೋಗ ಕೊಂಡೊಯ್ಯಲು ನಿರ್ಧರಿಸಿದ್ದೇವೆ’ ಎಂದರು.

‘ಈ ಹಿಂದೆ ಎಸ್.ಎಂ.ಕೃಷ್ಣ ನೇತೃತ್ವದ ಸರ್ಕಾರದಲ್ಲಿ ಮುಸ್ಲಿಂ ಸಮುದಾಯದ ಐವರು ಶಾಸಕರು ಮಂತ್ರಿಯಾಗಿದ್ದರು. ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಇದೇ ಮಾದರಿ ಅನುಸರಿಸಬೇಕು. ಅಲ್ಪಸಂಖ್ಯಾತ ಸಮುದಾಯವನ್ನು ಕೇವಲ ಮತಕ್ಕಾಗಿ ಬಳಸಿಕೊಳ್ಳುವ ಪ್ರಕ್ರಿಯೆ ನಿಲ್ಲಿಸಬೇಕು’ ಎಂದು ಆಗ್ರಹಿಸಿದರು.

‘ಈ ಹಿಂದೆ ಫಿರೋಜ್ ಸೇಠ್ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕರಾಗಿದ್ದರು. ಸತತ ಎರಡು ಸಲ ಗೆದ್ದರೂ ಅವರಿಗೆ ಮಂತ್ರಿ ಸ್ಥಾನ ಕೊಡದೆ ಅನ್ಯಾಯ ಮಾಡಲಾಗಿತ್ತು. ಈಗ ಫಿರೋಜ್ ಸೇಠ್ ಸಹೋದರ ಆಸಿಫ್ ಅವರಿಗೆ ಸಚಿವ ಸ್ಥಾನ ನೀಡಿ, ಹಿಂದಿನ ತಪ್ಪು ಮರುಕಳಿಸದಂತೆ ಎಚ್ಚರ ವಹಿಸಬೇಕು’ ಎಂದು ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-21-826526036

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.