ಬೆಳಗಾವಿ: ಪ್ರಕರಣವೊಂದಕ್ಕೆ ವಿಚಾರಣೆಗೆ ಕರೆತಂದಿದ್ದ ಆರೋಪಿಗಳು ನ್ಯಾಯಾಲಯದ ಆವರಣದಲ್ಲೇ ಮಾಧ್ಯಮದವರ ಮೇಲೆ ಹಲ್ಲೆ ನಡೆಸಿ, ಪೊಲೀಸರ ಕರ್ತವ್ಯಕ್ಕೂ ಅಡ್ಡಿಪಡಿಸಿದ ಘಟನೆ ಗುರುವಾರ ನಡೆಯಿತು. ಈ ಬಗ್ಗೆ ನಾಲ್ವರ ವಿರುದ್ಧ ಮಾರ್ಕೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುತ್ಯಾನಟ್ಟಿ ಗ್ರಾಮದ ನಿವಾಸಿಗಳಾದ ಬಸವರಾಜ ಹೊಳೆಪ್ಪ ದಡ್ಡಿ, ಬಸವಣ್ಣಿ (ಬಸು) ಸಿದ್ದಪ್ಪ ನಾಯ್ಕ, ನವೀನ ಸಿದ್ದಪ್ಪ ದಡ್ಡಿ ಹಾಗೂ ಲಕ್ಷ್ಮಣ ಫಕಿರಪ್ಪ ಹಲ್ಲೆ ನಡೆಯಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳು.

ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು. ವಿಚಾರಣೆ ಮುಗಿಸಿ ಮರಳುವಾಗ ಮಾಧ್ಯಮದವರು ವಿಡಿಯೊ ಮಾಡಲು ಮುಂದಾದರು. ಆ ವೇಳೆ ಆರೋಪಿಗಳು ಕ್ಯಾಮೆರಾ ಒಡೆಯಲು ಯತ್ನಿಸಿದರು. ಮಾಧ್ಯಮದವರಿಗೆ ಬೆದರಿಕೆ ಹಾಕಿ, ಅವಾಚ್ಯ ಪದಗಳಿಂದ ನಿಂದಿಸಿದರು. ಪೊಲೀಸರ ಕರ್ತವ್ಯಕ್ಕೂ ಧಕ್ಕೆ ತಂದರು.

ಈ ಬಗ್ಗೆ ಪೊಲೀಸ್ ಅಧಿಕಾರಿ ಅಡಿವೆಪ್ಪ ನಾವಿ ಅವರು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು. ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 126(2), 132, 352, 351(3) ಹಾಗೂ 3(5) ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-21-1165477696

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.