ಮಂಗಳವಾರ, ಆಗಸ್ಟ್ 3, 2021
28 °C

ಬೆಳಗಾವಿ: ನೀರು ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಥಣಿ: ತಾಲ್ಲೂಕಿನ ಶಿರಹಟ್ಟಿ ಗ್ರಾಮದ ಪುನರ್ವಸತಿ ಕೇಂದ್ರದ ನಿವಾಸಿಗಳು ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಖಾಲಿ ಕೊಡಗಳನ್ನು ಪ್ರದರ್ಶಿಸಿ ಪ್ರತಿಭಟಿಸಿದರು.

‘ಇಲ್ಲಿ ಮೂವತ್ತು ಕುಟುಂಬಗಳಿವೆ. ಆದರೆ, ಕುಡಿಯುವ ನೀರಿಲ್ಲದೇ ತೊಂದರೆ ಅನುಭವಿಸುತ್ತಿದ್ದೇವೆ. ಇಪ್ಪತ್ತೈದು ದಿನಗಳ ಹಿಂದೆ ಕೊಳವೆಬಾವಿ ಕೆಟ್ಟಿದೆ. ಅಕ್ಕ ಪಕ್ಕದಲ್ಲೂ ನೀರಿನ ಮೂಲವಿಲ್ಲದೆ ಪರದಾಡುತ್ತಿದ್ದೇವೆ. ಗ್ರಾಮ ಪಂಚಾಯಿತಿಗೆ ಮನವಿ ಮಾಡಿದರೂ ಸ್ಪಂದನೆ ಸಿಕ್ಕಿಲ್ಲ. ಪಿಡಿಒ ನಿರ್ಲಕ್ಷ್ಯ ಮಾಡುತ್ತಿದ್ದಾರೆ’ ಎಂದು ನಿವಾಸಿ ಸಂಜೀವ ಶಿವನೂರ ಆರೋಪಿಸಿದರು.

ಸಂಬಂಧಿಸಿದವರು ಕೂಡಲೇ ಇತ್ತ ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

‘ಅಲ್ಲಿ ನೀರಿನ ಅಭಾವ ಆಗಿರುವುದು ನಿಜ. 2 ದಿನಗಳಲ್ಲಿ ಕೊಳವೆಬಾವಿ ದುರಸ್ತಿ ಮಾಡಿಸಿ ನೀರಿನ ವ್ಯವಸ್ಥೆ ಮಾಡಲಾಗುವುದು’ ಎಂದು ಶಿರಹಟ್ಟಿ ಪಿಡಿಒ ಅಶೋಕ ಫಲಸಮಠ ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು