ಖಾನಾಪುರ: ಕರ್ನಾಟಕ ಸಂಭ್ರಮ ಸುವರ್ಣ ಮಹೋತ್ಸವ ಅಭಿಯಾನದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಘೋಷಿಸಿದ ರಾಜ್ಯ ಪ್ರಶಸ್ತಿಗೆ ತಾಲ್ಲೂಕಿನ ಮಂಗೇನಕೊಪ್ಪ ಗ್ರಾಮದ ನಿವಾಸಿ, ನಿವೃತ್ತ ಅರಣ್ಯ ಅಧಿಕಾರಿ ಎಸ್.ಎಂ ಚಲವಾದಿ ಆಯ್ಕೆಯಾಗಿದ್ದಾರೆ.

ಚಲವಾದಿಯವರು ಮೂರೂವರೆ ದಶಕ ಅರಣ್ಯ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಹೆಚ್ಚುವರಿ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಯಿಂದ ನಿವೃತ್ತಿ ಹೊಂದಿದ್ದಾರೆ. ನಿವೃತ್ತಿಯ ಬಳಿಕ ಅರಣ್ಯ ಸಂರಕ್ಷಣೆ, ಪರಿಸರ ರಕ್ಷಣೆಯ ಕುರಿತು ಕಾಳಜಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ಅವರ ಸಾಮಾಜಿಕ ಕಳಕಳಿಯನ್ನು ಪರಿಗಣಿಸಿದ ರಾಜ್ಯ ಸರ್ಕಾರ ಅವರಿಗೆ ಈ ಬಾರಿಯ ಕರ್ನಾಟಕ ಸಂಭ್ರಮ ಸುವರ್ಣ ಮಹೋತ್ಸವ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಚಲವಾದಿಯವರಿಗೆ ಪ್ರಶಸ್ತಿ ಘೋಷಣೆಯಾಗಿದ್ದಕ್ಕೆ ಮಂಗೇನಕೊಪ್ಪ ಗ್ರಾಮದ ನಾಗರಿಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.