ಬೈಲಹೊಂಗಲ: ‘ಲಿಂಗಾಯತ ಸಮಾಜ ಸ್ಥಾಪಕ, ವಿಶ್ವಗುರು ಬಸವೇಶ್ವರರ ಜಯಂತಿ ಅಂಗವಾಗಿ ಬಸವ ಜಯಂತಿ ಮಹೋತ್ಸವ ಸಮಿತಿ ವತಿಯಿಂದ ಏ. 26 ರಂದು ಸಂಜೆ 4ಕ್ಕೆ ಬೆಳಗಾವಿಯಲ್ಲಿ ಜಗಜ್ಯೋತಿ ಬಸವೇಶ್ವರರ ಅದ್ಧೂರಿ ಜಯಂತಿ ಆಚರಣೆ, ಬಸವ ವೈಭವ, ಬಸವೇಶ್ವರ ಭಾವಚಿತ್ರ ಭವ್ಯ ಮೆರವಣಿಗೆ ನಡೆಯಲಿದೆ' ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಉಪಾಧ್ಯಕ್ಷ ಗುರು ಮೆಟಗುಡ್ಡ ಹೇಳಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.

‘ಜಿಲ್ಲೆಯ ಸರ್ವ ಬಸವಪರ ಸಂಘಟನೆಗಳ ಒಕ್ಕೂಟದಿಂದ ಬಸವ ವೈಭವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯ ಸಮಸ್ತ ಜನತೆ ಯಾವುದೇ ಜಾತಿ, ಮತ, ಪಂಥ, ಪಕ್ಷಬೇದ ಮರೆತು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬಸವ ವೈಭವ ಕಾರ್ಯಕ್ರಮ ಯಶಸ್ವಿಗೊಳಿಸಬೇಕು’ ಎಂದರು.

‘ಕಾರ್ಯಕ್ರಮದ ಅಂಗವಾಗಿ ಏ. 26 ರಂದು ಸಂಜೆ 4ಕ್ಕೆ ಬಸವೇಶ್ವರ (ಗೋವಾವೇಸ್) ವೃತ್ತದಿಂದ ಬೈಕ್ ರ್ಯಾಲಿ ನಡೆಯಲಿದೆ. ವೀರರಾಣಿ ಕಿತ್ತೂರು ಚನ್ನಮ್ಮ ವೃತ್ತದಿಂದ ಬಸವೇಶ್ವರ ಭಾವಚಿತ್ರದ ಭವ್ಯ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಸಮಾಜ ಸುಧಾರಣೆಗೆ ಬಸವೇಶ್ವರರು ನೀಡಿದ ತತ್ವಗಳನ್ನು ಯುವಕರಲ್ಲಿ ಬಿಂಬಿಸುವ ನಿಟ್ಟಿನಲ್ಲಿ ಈ ಬ್ರಹತ್ ಕಾರ್ಯಕ್ರಮ ಆಯೋಜಿಲಾಗಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಪೂಜ್ಯರು, ಸಚಿವರು, ಸಂಸದರು, ಶಾಸಕರು, ಮಾಜಿ ಶಾಸಕರು, ವಿಧಾನಪರಿಷತ ಸದಸ್ಯರು, ಉದ್ಯಮಿಗಳು, ಬಸವಾಭಿಮಾನಿಗಳು ಸೇರಿ ಸಾವಿರಾರು ಜನತೆ ಪಾಲ್ಗೊಳ್ಳಲಿದ್ದು, ಹಬ್ಬದ ವಾತಾವರಣ ಸೃಷ್ಟಿಯಾಗಲಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-21-904177392

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.