ಬೆಳಗಾವಿ: ‘ನಗರದಲ್ಲಿ ಜಿಲ್ಲಾಮಟ್ಟದ ಬಸವ ಜಯಂತಿ ಮುಖ್ಯ ಮೆರವಣಿಗೆಯನ್ನು ಏಪ್ರಿಲ್ 20ರ ಬದಲಿಗೆ ಏಪ್ರಿಲ್ 26ರಂದು ನಡೆಸಲಾಗುವುದು’ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಬಸವ ಜಯಂತಿ ಆಚರಣೆ ಪೂರ್ವಭಾವಿ ಸಭೆ ನಂತರ, ಸುದ್ದಿಗಾರರ ಜತೆಗೆ ಅವರು ಮಾತನಾಡಿದರು.

‘ಏಪ್ರಿಲ್ 19ರಂದು ಬೆಳಗಾವಿಯಲ್ಲಿ ಬೈಕ್ ರ್ಯಾಲಿ ನಡೆಸಲಾಗುವುದು. 20ರಂದು ಗ್ರಾಮೀಣ ಭಾಗದಲ್ಲಿ ನಾನಾ ಕಾರ್ಯಕ್ರಮ ನಡೆಯಲಿವೆ. 26ರಂದು ಸಂಜೆ 4ಕ್ಕೆ ಬೆಳಗಾವಿಯಲ್ಲಿ ಮುಖ್ಯ ಮೆರವಣಿಗೆ ನಡೆಸುತ್ತೇವೆ. ಇದರಲ್ಲಿ 50 ಸಾವಿರಕ್ಕೂ ಅಧಿಕ ಬಸವಾಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ’ ಎಂದರು.

ಕೆಎಲ್ಇ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ‘ರಾಣಿ ಚನ್ನಮ್ಮನ ವೃತ್ತದಿಂದ ಆರಂಭವಾಗುವ ಮುಖ್ಯ ಮೆರವಣಿಗೆ ಲಿಂಗರಾಜ ಕಾಲೇಜು ಮೈದಾನದಲ್ಲಿ ಮುಕ್ತಾಯವಾಗಲಿದೆ. ಇದರಲ್ಲಿ ಬಸವಣ್ಣನ ಸಂದೇಶಗಳನ್ನು ಪ್ರಚುರಪಡಿಸುತ್ತೇವೆ. ಡಾಲ್ಬಿ ಬಳಸದಿರಲು ತೀರ್ಮಾನಿಸಿದ್ದೇವೆ. ಮೆರವಣಿಗೆ ಮುಗಿದ ನಂತರ ಮಹಾಪ್ರಸಾದ ವ್ಯವಸ್ಥೆ ಮಾಡುತ್ತೇವೆ’ ಎಂದು ಹೇಳಿದರು.

ಸಂಸದ ಜಗದೀಶ ಶೆಟ್ಟರ್, ಶಾಸಕರಾದ ಗಣೇಶ ಹುಕ್ಕೇರಿ, ಬಾಬಾಸಾಹೇಬ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮಾಜಿ ಸಚಿವರಾದ ಎ.ಬಿ.ಪಾಟೀಲ, ಶಶಿಕಾಂತ ನಾಯಕ, ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-21-760157334

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.