ಬೆಳಗಾವಿ: ‘ಕಾರ್ಯಕರ್ತರ ಜನಪರ ಹೋರಾಟದಿಂದ ಬಿಜೆಪಿ ಬೆಳೆದಿದೆ. ಸಂಘಟನೆ ಮೂಲಕ ಪಕ್ಷದ ಚಟುವಟಿಕೆಗಳನ್ನು ಬೂತ್ ಮಟ್ಟದಿಂದ ರಾಷ್ಟ್ರಮಟ್ಟದವರೆಗೆ ತಲುಪಿಸಲು ಎಲ್ಲರೂ ಶ್ರಮಿಸಬೇಕು’ ಎಂದು ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ ಕರೆ ನೀಡಿದರು.

ಇಲ್ಲಿನ ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಕಚೇರಿಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯ ಮತಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷದ ಕಾರ್ಯಕ್ರಮಗಳನ್ನು ಶಿಸ್ತುಬದ್ಧವಾಗಿ ಆಯೋಜಿಸಬೇಕು’ ಎಂದು ಸೂಚಿಸಿದರು.

ಮಾಜಿ ಶಾಸಕರಾದ ಸಂಜಯ ಪಾಟೀಲ, ಮಹಾಂತೇಶ ದೊಡ್ಡಗೌಡರ, ‘ರಾಜ್ಯದಲ್ಲಿರುವುದು ಹಗರಣಗಳ ಸರ್ಕಾರ. ವಿವಿಧ ಹಗರಣಗಳು, ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟ ಹಣದ ದುರ್ಬಳಕೆ, ಭ್ರಷ್ಟಾಚಾರ, ಅನಿಯಂತ್ರಿತ ಮಾದಕವಸ್ತು ಹಾವಳಿ, ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಟ... ಇವೇ ಕಾಂಗ್ರೆಸ್ ಸರ್ಕಾರದ ಸಾಧನೆಗಳು’ ಎಂದು ಟೀಕಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ, ಮಲ್ಲಿಕಾರ್ಜುನ ಮಾದಮ್ಮನವರ, ಸಂದೀಪ ದೇಶಪಾಂಡೆ, ಧನಶ್ರೀ ದೇಸಾಯಿ, ಪ್ರಮೋದ ಕೊಚೇರಿ, ಮಹೇಶ ಮೋಹಿತೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.