ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿಯಲ್ಲಿ ಬಿಜೆಪಿ ಸಮಾವೇಶ: ಕಾಣದ ಅಂತರ, ಮಾಸ್ಕ್!

Last Updated 17 ಜನವರಿ 2021, 10:32 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಬಿಜೆಪಿ ಜನಸೇವಕ ಸಮಾವೇಶ ಸಮಾರೋಪದಲ್ಲಿ ಸಹಸ್ರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಆದರೆ, ಕೋವಿಡ್ ಭೀತಿಯ ನಡುವೆಯೂ ಬಹುತೇಕರು ಮಾಸ್ಕ್ ಧರಿಸಿರಲಿಲ್ಲ. ಸುರಕ್ಷಿತ ಅಂತರ ಕಾಯ್ದುಕೊಳ್ಳಲಿಲ್ಲ.

ವೇದಿಕೆಯಲ್ಲಿ ಮಾತ್ರವೇ ಅಂತರ ಕಾಯ್ದುಕೊಳ್ಳುವ ರೀತಿಯಲ್ಲಿ ಆಸನಗಳ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಸಭಿಕರ ಸಾಲಿನಲ್ಲಿ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಇರಲಿಲ್ಲ. ಅಭಿನಂದನೆಗೆ ಒಳಗಾಗಲು ಬಂದಿದ್ದ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯ್ತಿ ಸದಸ್ಯರು ಕೇಸರಿ ಪೇಟ ತೊಟ್ಟಿದ್ದರಾದರೂ ಮಾಸ್ಕ್ ಗಳನ್ನು ಧರಿಸಿರಲಿಲ್ಲ. ಅಲ್ಲೂ ಅಂತರ ಕಂಡುಬರಲಿಲ್ಲ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಸಮಾವೇಶ ನಡೆಸಲಾಗುವುದು ಎಂದು ಆಯೋಜಕರು ಹೇಳಿದ್ದು ಅನುಷ್ಠಾನಕ್ಕೆ ಬರಲಿಲ್ಲ. ಪ್ರವೇಶ ದ್ವಾರದಲ್ಲಿ ದೇಹದ ಉಷ್ಣತೆ ಪರಿಶೀಲಿಸಲಾಯಿತು. ಸ್ಯಾನಿಟೈಸರ್ ನೀಡಲಾಯಿತು.

ಸಮಾವೇಶ ಸಮಾರೋಪ ಆರಂಭ
ಬೆಳಗಾವಿ:
ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿ ಜನಸೇವಕ ಸಮಾವೇಶ ಸಮಾರೋಪ ಆರಂಭವಾಗಿದೆ.

ಜಿಲ್ಲೆಯ ವಿವಿಧೆಡೆಯಿಂದ ಸಹಸ್ರಾರು ಕಾರ್ಯಕರ್ತರು ಬಂದು ಸೇರಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗಾಗಿ ಕಾರ್ಯಕರ್ತರು ಕಾಯುತ್ತಿದ್ದಾರೆ. ಸುಡು‌ ಬಿಸಿಲಲ್ಲೂ‌ ಬಿಜೆಪಿ ಘೋಷಣೆಗಳು ಮೊಳಗುತ್ತಿವೆ.

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ, ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ಶಾಸಕರಾದ ಅಭಯ ಪಾಟೀಲ, ಪಿ. ರಾಜೀವ, ಮಹಾದೇವಪ್ಪ ಯಾದವಾಡ, ಮಹಾಂತೇಶ ದೊಡ್ಡಗೌಡರ ಮೊದಲಾದವರು ವೇದಿಕೆಗೆ ಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT