ಚಿಕ್ಕೋಡಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ನೀತಿ ಅನುಸರಿಸಿದೆ ಎಂದು ಆಪಾದಿಸಿ ಚಿಕ್ಕೋಡಿ ಜಿಲ್ಲಾ ಬಿಜೆಪಿ ಘಟಕ ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಸರ್ಕಾರದ ನಡೆಯನ್ನು ವಿರೋಧಿಸಿತು.
ರಾಯಬಾಗ ಶಾಸಕ ದುರ್ಯೋಧನ ಐಹೊಳೆ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜೇಶ ನೇರ್ಲೆ ನೇತೃತ್ವದಲ್ಲಿ ಬಿಜೆಪಿ ಕಚೇರಿಯಿಂದ ಹೊರಟ ಪ್ರತಿಭಟನಾಕಾರರು ಬಸವ ಸರ್ಕಲ್ ಬಳಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
'ಅಧೀವೇಶನದಲ್ಲಿ ಬಿಜೆಪಿ ಪಕ್ಷದ ಶಾಸಕರನ್ನು ಅಮಾನತ್ತುಗೊಳಿಸಿ ಪ್ರತಿಪಕ್ಷದ ಧ್ವನಿಯನ್ನು ಹತ್ತಿಕ್ಕುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ’ ಎಂದು ಶಾಸಕ ಐಹೊಳೆ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ, ಹೆಸ್ಕಾಂ ಮಾಜಿ ನಿರ್ದೇಶಕ ಮಹೇಶ ಭಾತೆ, ವಕೀಲ ಅಶೋಕ ಹರಗಾಪೂರೆ, ಉಮರಾಣಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಣ ಪೂಜೇರಿ, ಸುರೇಶ ಘರಬುಡೆ, ವಿಜಯ ಕೋಠಿವಾಲೆ, ರಾಜು ಹಿರೇಕೋಡಿ, ಮಹಾಂತೇಶ ಯಶವಂತಗೋಳ, ಸಂಜೀವ ಪಾಟೀಲ, ಅಣ್ಣಾಸಾಹೇಬ ಖೇಮಲಾಪೂರೆ, ಮುರಿಗೆಪ್ಪ ಅಡಿಸೇರಿ, ಧನಪಾಲ ಭೀಮನಾಯಿಕ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.