ಮಂಗಳವಾರ, ಜನವರಿ 19, 2021
17 °C

ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ ಇನ್ನಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ (40) ಬೆಂಗಳೂರಿನ ಖಾಸಗಿ ಹೋಟೆಲ್‌ ಕೊಠಡಿಯಲ್ಲಿ ತಂಗಿದ್ದ ವೇಳೆ ತೀವ್ರ ಹೃದಯಾಘಾತದಿಂದ ಶುಕ್ರವಾರ ನಿಧನರಾದರು.

ಅವಿವಾಹಿತರಾಗಿದ್ದ ಅವರಿಗೆ ತಾಯಿ, ಸಹೋದರ ಹಾಗೂ ಸಹೋದರಿ ಇದ್ದಾರೆ.

ಬೈಲಹೊಂಗಲ ತಾಲ್ಲೂಕು ನೇಸರಗಿ ಮೂಲದವರಾದ ಅವರು, ಇಲ್ಲಿನ ಶಿವಬಸವ ನಗರದಲ್ಲಿ ತಾಯಿ ಜೊತೆ ವಾಸವಿದ್ದರು. 21 ವರ್ಷಗಳಿಂದ ಆರ್‌ಎಸ್‌ಎಸ್, ಎಬಿವಿಪಿ ಮತ್ತು ಬಿಜೆಪಿ ಮೂಲಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದ್ದರು. ಇಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿದ್ದರು. ರೈಲ್ವೆ ಖಾತೆ ರಾಜ್ಯ ಸಚಿವ ದಿವಂಗತ ಸುರೇಶ ಅಂಗಡಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ನಾಯಕರೊಂದಿಗೆ ನಿಕಟ  ಸಂಪರ್ಕ ಹೊಂದಿದ್ದರು. ಬಿಜೆಪಿ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ವಿಷಯವಾಗಿ ಗುರುವಾರ ಬೆಂಗಳೂರಿನಲ್ಲಿ ಪಕ್ಷದ ನಾಯಕರನ್ನು ಭೇಟಿಯಾಗಿದ್ದರು ಮತ್ತು ಶಿವಮೊಗ್ಗದಲ್ಲಿ ನಿಗದಿಯಾಗಿದ್ದ ಕಾರ್ಯಕಾರಿಣಿಗೆ ತೆರಳಲು ಬೆಂಗಳೂರಿನಲ್ಲಿ ತಂಗಿದ್ದರು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು