ಬೈಲಹೊಂಗಲ: ತಾಲ್ಲೂಕಿನ ನಯಾನಗರ ಗ್ರಾಮದ ಸುಖದೇವಾನಂದ ಪುಣ್ಯಾಶ್ರಮದ ಅಭಿನವ ಸಿದ್ಧಲಿಂಗ ಸ್ವಾಮೀಜಿ ಅವರ ಜನ್ಮದಿನದ ಅಂಗವಾಗಿ ಜೂನ್ 1ರಂದು ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 8ಕ್ಕೆ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಭಕ್ತರಿಂದ ಹಣ್ಣು ಹಂಪಲ ವಿತರಣೆ, ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರ ವರೆಗೆ ನಯಾನಗರ ಮಠದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳವಡಿ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಭಕ್ತರಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಜರುಗಲಿದೆ. ಮಧ್ಯಾಹ್ನ 2ರಿಂದ ಸಂಜೆ 6ರ ವರೆಗೆ ಪುಟ್ಟ ಮಕ್ಕಳಿಗೆ ಅಭಿನವ ಸಿದ್ಧಲಿಂಗ ಸ್ವಾಮೀಜಿ ಅಕ್ಷರಭ್ಯಾಸ ಮಾಡಿಸಲಿದ್ದಾರೆ.

ಸಂಜೆ 7ಕ್ಕೆ ಮಠದ ಆವರಣದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಎಸ್ಎಸ್ಎಲ್ಸಿಯಲ್ಲಿ ಉತ್ತಮ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ಬಳಿಕ ಶ್ರೀಗಳ ಜನ್ಮದಿನ ಸಭಾ ಕಾರ್ಯಕ್ರಮ, ಸಿಡಿಮದ್ದಿನ ಪ್ರದರ್ಶನ, ಮಹಾಪ್ರಸಾದ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.