ಬೆಳಗಾವಿ: ಭಾಷೆ ಮತ್ತು ಗಡಿ ವಿಚಾರವಾಗಿಯೇ ಸದಾ ಸದ್ದು ಮಾಡುತ್ತಿದ್ದ ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ಮತ್ತೆ ಗಡಿ ವಿಚಾರ ಮುನ್ನೆಲೆಗೆ ಬಂದಿದೆ.

ಬುಧವಾರ ನಡೆದ ಪರಿಷತ್ ಸಭೆಯಲ್ಲಿ ರಾಜ್ಯದ ಪರ ನಿರ್ಣಯ ಕೈಗೊಳ್ಳದ ಬಿಜೆಪಿ, ಕಾಂಗ್ರೆಸ್ ಮತ್ತು ಎಐಎಂಐಎಂ ರಾಜಕೀಯ ಪಕ್ಷಗಳ ಚಿಹ್ನೆ ಮೇಲೆ ಆಯ್ಕೆಯಾದ ಸದಸ್ಯರು ಹಾಗೂ ಎರಡೂ ಗುಂಪುಗಳ ಪಕ್ಷೇತರ ಸದಸ್ಯರ ವಿರುದ್ಧ ಆಕ್ಷೇಪ ವ್ಯಕ್ತವಾಗಿದೆ.

‘ಬೆಳಗಾವಿ ಮತ್ತು ರಾಜ್ಯದ ಇತರೆ ಮರಾಠಿ ಮಾತನಾಡುವ ಪ್ರದೇಶಗಳನ್ನು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸಬೇಕು’ ಎಂಬ ನಿರ್ಣಯವನ್ನು 2005ರಲ್ಲಿ ಬೆಳಗಾವಿ ಪಾಲಿಕೆಯಲ್ಲಿ ಅಂಗೀಕರಿಸಲಾಗಿತ್ತು. ಈಗ ಸುಪ್ರೀಂ ಕೋರ್ಟ್ನಲ್ಲಿ ಇರುವ ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದ ಪ್ರಕರಣದಲ್ಲಿ ಈ ನಿರ್ಣಯವನ್ನು, ಮಹಾರಾಷ್ಟ್ರ ಸರ್ಕಾರ ಮಹತ್ವದ ದಾಖಲೆಯಾಗಿ ಬಳಸುತ್ತಿದೆ.

ಆದರೆ, ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ’ ಎಂಬ ನಿರ್ಣಯವನ್ನು ಅಂಗೀಕರಿಸುವಲ್ಲಿ ವಿವಿಧ ರಾಜಕೀಯ ಪಕ್ಷದವರು ಮತ್ತು ಪಕ್ಷೇತರ ಸದಸ್ಯರು ವಿಫಲವಾಗಿ ನಾಡಿಗೆ ದ್ರೋಹ ಬಗೆದಿದ್ದಾರೆ’ ಎಂಬ ಆರೋಪ ಕೇಳಿಬರುತ್ತಿದೆ. ಮಾರ್ಚ್ 26ರಂದು ಕನ್ನಡ ಸಂಘಟನೆಯವರು ನೂತನ ಮೇಯರ್ ಪ್ರೀತಿ ಕಾಮಕರ ಮತ್ತು ಉಪಮೇಯರ್ ಹನುಮಂತ ಕೊಂಗಾಲಿ ಭೇಟಿಯಾಗಿ, ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ’ ಎಂಬ ನಿರ್ಣಯವನ್ನು ಪಾಲಿಕೆ ಪರಿಷತ್ ಸಭೆಯಲ್ಲಿ ಅಂಗೀಕರಿಸಬೇಕು ಎಂದು ಕೋರಿದ್ದರು. ಇದಕ್ಕೆ ಮೇಯರ್ ಮತ್ತು ಉಪಮೇಯರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದರು.

ಆದರೆ, ಏಪ್ರಿಲ್ನಲ್ಲಿ ನಡೆದ ಪರಿಷತ್ ಸಭೆಯಲ್ಲಿ ಯಾವುದೇ ನಿರ್ಣಯ ಅಂಗೀಕರಿಸಲಿಲ್ಲ. ಬುಧವಾರ ನಡೆದ ಪರಿಷತ್ ಸಭೆಯಲ್ಲಿ ಬೇಡಿಕೆ ಈಡೇರಲಿಲ್ಲ. ಬದಲಿಗೆ, ‘ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ಇದೆ. ಈ ನಿರ್ಣಯ ಕೈಗೊಳ್ಳಲು ಅವಕಾಶವಿದೆಯೇ ಎಂದು ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದು ಅಭಿಪ್ರಾಯ ಕೇಳಲಾಗುವುದು’ ಎಂದಷ್ಟೇ ಹೇಳಿ ಪ್ರೀತಿ ಕಾಮಕರ ಜಾರಿಕೊಂಡರು.

‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ ಎಂಬ ನಿರ್ಣಯ ಅಂಗೀಕರಿಸಿ. ಗಡಿ ವಿವಾದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಏನೇ ತೀರ್ಪು ಕೊಟ್ಟರೂ ನಾವು ಪಾಲಿಸುತ್ತೇವೆ’ ಎಂದು ಕನ್ನಡ ಹೋರಾಟಗಾರರೂ ಆಗಿರುವ ನಾಮನಿರ್ದೇಶಿತ ಸದಸ್ಯ ರಮೇಶ ಸೊಂಟಕ್ಕಿ ಪದೇಪದೆ ಹೇಳಿದರೂ, ಯಾವುದೇ ಪ್ರಯೋಜನವಾಗಲಿಲ್ಲ.

ಈ ಮಧ್ಯೆ, ಮರಾಠಿಗರ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಕಾಂಗ್ರೆಸ್ ಮತ್ತು ಎಐಎಂಐಎಂ ಚಿಹ್ನೆಗಳ ಮೇಲೆ ಆಯ್ಕೆಯಾದ ಸದಸ್ಯರು ಮತ್ತು ಎರಡೂ ಗುಂಪುಗಳ ಪಕ್ಷೇತರ ಸದಸ್ಯರು ಒಂದೂ ಮಾತನಾಡದೆ ಮೌನ ವಹಿಸಿದ್ದು ಆಕ್ರೋಶಕ್ಕೆ ಕಾರಣವಾಯಿತು.

ಆದರೆ, ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಬೆಂಬಲಿತ ಇಬ್ಬರು ಪಕ್ಷೇತರ ಸದಸ್ಯರಾದ ರವಿ ಸಾಳುಂಕೆ ಮತ್ತು ಶಿವಾಜಿ ಮಂಡೋಳಕರ ರಾಜ್ಯದ ಪರ ನಿರ್ಣಯ ಅಂಗೀಕಾರವಾಗದಂತೆ ತಡೆಯುವಲ್ಲಿ ಯಶಸ್ವಿಯಾದರು.

‘ನಾವು ರಾಜ್ಯದ ಪರ ಎಂದು ಹೇಳಿಕೊಳ್ಳುವ ಸದಸ್ಯರು ರಾಜ್ಯಕ್ಕೆ ದ್ರೋಹ ಬಗೆದಿದ್ದಾರೆ. ರಾಜ್ಯದ ಪರ ನಿರ್ಣಯ ತೆಗೆದುಕೊಳ್ಳುವ ವಿಚಾರದಲ್ಲಿ, ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರು ಮೌನ ವಹಿಸಿರುವುದು ಅನುಮಾನಕ್ಕೆ ಕಾರಣವಾಗಿದೆ’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಆರೋಪಿಸಿದರು.

‘ರಾಜ್ಯದ ಪರ ನಿರ್ಣಯ ಅಂಗೀಕರಿಸಲಾಗುವುದು ಎಂದು ಪರಿಷತ್ ಸಭೆಗೂ ಮುನ್ನ, ಕೊಂಗಾಲಿ ನನಗೆ ಭರವಸೆ ನೀಡಿದ್ದರು. ಆದರೆ, ತಮ್ಮ ಮಾತು ಉಳಿಸಿಕೊಂಡಿಲ್ಲ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-21-1077667548

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.