ಬೆಳಗಾವಿ: ಪ್ರಸಕ್ತ ಬಜೆಟ್ನಲ್ಲಿ ಬೆಳಗಾವಿ ಜಿಲ್ಲೆಗೆ ‘ಸಂಭ್ರಮ’ ತರುವಂಥ ಯಾವುದೇ ಯೋಜನೆಯನ್ನು ಸರ್ಕಾರ ಘೋಷಣೆ ಮಾಡಿಲ್ಲ. 11 ಶಾಸಕರು ಅದರಲ್ಲಿ ಇಬ್ಬರು ಪ್ರಭಾವಿ ಸಚಿವರು ಇರುವ ಕಾಂಗ್ರೆಸ್ನ ವಿಧಾನಸಭಾ ಕ್ಷೇತ್ರಗಳಿಗೂ ಮಹತ್ವದ ಕೊಡುಗೆ ಸಿಕ್ಕಿಲ್ಲ. ಆರ್ಧಕ್ಕೆ ನಿಂತ 7 ಏತನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದು ಹಾಗೂ 8 ಶ್ರಮಿಕ ವಸತಿ ಶಾಲೆಗಳನ್ನು ನಿರ್ಮಿವುಸುವುದು; ಈ ಬಾರಿ ಜಿಲ್ಲೆಗೆ ಸಿಕ್ಕ ಮಹತ್ವದ ಕೊಡುಗೆಗಳು.

ಸವದತ್ತಿ ತಾಲ್ಲೂಕಿನ ಚಚಡಿ, ಮುರಗೋಡ, ಗೋಕಾಕ ತಾಲ್ಲೂಕಿನ ಗೊಡಚಿನಮಲ್ಕಿ, ಅಥಣಿ ತಾಲ್ಲೂಕಿನ ಬಸವೇಶ್ವರ (ಕೆಂಪವಾಡ) ಏತ ನೀರಾವರಿ, ಗೋಕಾಕ ತಾಲ್ಲೂಕಿನ ಅಡವಿಸಿದ್ದೇಶ್ವರ ಏತ ನೀರಾವರಿ, ಶಂಕರಲಿಂಗ, ರಾಮದುರ್ಗ ತಾಲ್ಲೂಕಿನ ಸಾಲಾಪುರ ಏತ ನೀರಾವರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಈ ಎಲ್ಲ ಯೋಜನೆಗಳಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಘೋಷಣೆ ಮಾಡಲಾಗಿತ್ತು. ಕೆಲವು ಅನುಮೋದನೆ ಹಂತದಲ್ಲಿದ್ದರೆ, ಮತ್ತೆ ಕೆಲವು ಕಾಮಗಾರಿ ಅರ್ಧಕ್ಕೆ ನಿಂತಿತ್ತು. ಒಣ ಸೀಮೆ ಹೊಂದಿರುವ ಈ ಭಾಗದ ಜನರ ಬಹು ದಶಕಗಳ ಬೇಡಿಕೆ ಇದರೊಂದಿಗೆ ಈಡೇರಿದಂತಾಗಿದೆ.

ಅಲ್ಲದೇ, ಕೃಷ್ಣಾ, ಕಾವೇರಿ, ಗೋದಾವರಿ ಹಾಗೂ ಇತರೆ ನದಿ ಕಣಿವೆಗಳಲ್ಲಿ ಒಟ್ಟಾರೆ ₹8,045 ಕೋಟಿ ಮೊತ್ತದ 75 ನೀರಾವರಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವುದಾಗಿ ಘೋಷಿಸಲಾಗಿದೆ. ಇದರಲ್ಲಿ ಕೃಷ್ಣಾ ಹಾಗೂ ಮಲಪ್ರಭಾ ಕಣಿವೆಗಳಲ್ಲಿ ಬರುವ ನವಿಲುತೀರ್ಥ ಅಣೆಕಟ್ಟೆ ಕೆಳಭಾಗದಲ್ಲಿ ಮಲಪ್ರಭಾ ನದಿಗೆ ಅಕ್ವೆಡಕ್ಟ್ ನಿರ್ಮಾಣ, ರಾಮದುರ್ಗ ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳಿಗೆ ನೀರು ತುಂಬಿಸುವ ಯೋಜನೆ, ಗೊಣ್ಣಾಗರ ಗ್ರಾಮದ ಹತ್ತಿರ ಮಲಪ್ರಭಾ ನದಿಯಿಂದ ಕೊರೆದ ಭಾಗಕ್ಕೆ ತಡೆಗೋಡೆ ನಿರ್ಮಾಣ, ಯರಗಟ್ಟಿ ಏತ ನೀರಾವರಿ ಯೋಜನೆ, ರೇಣುಕಾ ಏತ ನೀರಾವರಿ ಯೋಜನೆ, ಖಾನಾಪುರ ತಾಲ್ಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ಸಮೀಪ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣ ಮಾಡುವುದಾಗಿ ಘೋಷಿಸಲಾಗಿದೆ.

ರಾಯಬಾಗ ತಾಲ್ಲೂಕಿನ ಕುಡಚಿ ಕೆರೆ ತುಂಬಿಸುವ ಯೋಜನೆ ಹಾಗೂ ರಾಮದುರ್ಗ ತಾಲ್ಲೂಕಿನ ಕೆರೆಗಳ ಭರ್ತಿ ಮಾಡುವುದು, ರಾಮದುರ್ಗ ತಾಲ್ಲೂಕಿನ ಗೊಣ್ಣಾಗರ ಗ್ರಾಮದ ಹತ್ತಿರ ಮಲಪ್ರಭಾ ನದಿಯಿಂದ ಕೊರೆದ ಭಾಗಕ್ಕೆ ತಡೆಗೋಡೆ ನಿರ್ಮಾಣ ಮಾಡುವುದಾಗಿ ತಿಳಿಸಿದ್ದರೂ ಇದಕ್ಕೆ ಅನುದಾನ ಸ್ಪಷ್ಟಪಡಿಸಿಲ್ಲ.

ಬೈಲಹೊಂಗಲದಲ್ಲಿ ʻಪ್ರಜಾಸೌಧʼ ನಿರ್ಮಾಣ, ಹೊಸದಾಗಿ ತಾಲ್ಲೂಕು ಕೇಂದ್ರವಾದ ಯರಗಟ್ಟಿಯಲ್ಲಿ ಪೊಲೀಸ್ ಠಾಣೆ ನಿರ್ಮಾಣ, ಧಾರವಾಡ– ಕಿತ್ತೂರು– ಬೆಳಗಾವಿ ರೈಲು ಮಾರ್ಗಕ್ಕಾಗಿ ಮೂಲ ಸೌಕರ್ಯ ಅಭಿವೃದ್ಧಿ; ಹಳೆಯ ಬೇಡಿಕೆಗಳನ್ನು ಈಡೇರಿಸಲಾಗಿದೆ.

ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಆಯ್ದ 10 ಸಾವಿರ ಫಲಾನುಭವಿಗಳಿಗೆ ಶೇ 25 ರಷ್ಟು ಸಹಾಯಧನದಲ್ಲಿ ಕುರಿ/ಮೇಕೆ ಘಟಕಗಳನ್ನು ಸ್ಥಾಪನೆ, ಹೈನುಗಾರಿಕೆ ಪ್ರೋತ್ಸಾಹಿಸಲು ಆಯ್ದ 10 ಸಾವಿರ ಫಲಾನುಭವಿಗಳಿಗೆ ಶೇ 25ರಷ್ಟು ಸಹಾಯಧನದಲ್ಲಿ ಹಸು/ಎಮ್ಮೆ ಖರೀದಿಸಲು ಪ್ರೋತ್ಸಾಹಧನ ನೀಡಲು ಪ್ರಸಕ್ತ ಸಾಲಿನಲ್ಲಿ ಒಟ್ಟು ₹20 ಕೋಟಿ ಅನುದಾನವನ್ನು ಬೆಳಗಾವಿ ಜಿಲ್ಲೆಗೆ ಮೀಸಲಿರಿಸಲಾಗಿದೆ.

ಮೀನು ಆಹಾರದ ಸೇವನೆಯನ್ನು ಉತ್ತೇಜಿಸುವ ಹಾಗೂ ಸಾರ್ವಜನಿಕರಿಗೆ ಸ್ವಚ್ಛ ಮತ್ತು ಗುಣಮಟ್ಟದ ಮೀನು ಉತ್ಪನ್ನಗಳು ಲಭ್ಯವಾಗುವಂತೆ ಮಾಡಲು ‘ಮತ್ಸ್ಯದರ್ಶಿನಿ’ ಸ್ಥಾಪಿಸಲಾಗುವುದು ಎಂದೂ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ.

ಮಹಾತ್ಮ ಗಾಂಧೀಜಿ ಭೇಟಿ ಕೊಟ್ಟ ಸ್ಥಳಗಳಲ್ಲಿ ಅವರ ಸ್ಮರಣಾರ್ಥ ಗಾಂಧಿ ಸ್ಮಾರಕ ಸ್ತಂಭಗಳನ್ನು ನಿರ್ಮಿಸಲು ತಿಳಿಸಲಾಗಿದೆ. ಆದರೆ, ಬೆಳಗಾವಿಯಲ್ಲಿ ಈಗಾಗಲೇ ವೀರಸೌಧ ನಿರ್ಮಿಸಿದ ಕಾರಣ ಈ ಸ್ತಂಭ ಬರುತ್ತದೆಯೇ ಎಂದು ಕಾದು ನೋಡಬೇಕು.

ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಆದ್ಯತೆ...

ಅಥಣಿ ರಾಮದುರ್ಗ ಯಮಕನಮರಡಿ ಬೈಲಹೊಂಗಲ ಕಾಗವಾಡ ಸವದತ್ತಿ ಚಿಕ್ಕೋಡಿ–ಸದಲಗ ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರಗಳಲ್ಲಿ ಶ್ರಮಿಕ ವಸತಿ ಶಾಲೆ ಆರಂಭಿಸುವ ಬಗ್ಗೆಯೂ ಇಲಾಖೆಯಿಂದ ಅನುಮೋದನೆ ಕೊಡಲಾಗಿದೆ. ಈ ಕ್ಷೇತ್ರಗಲ್ಲಿ ದುಡಿಯುವ ವರ್ಗದ ಜನಸಂಖ್ಯೆ ಹೆಚ್ಚಿರುವ ಕಾರಣ ಈ ಶ್ರಮಿಕ ವಸತಿ ಶಾಲೆಗಳು ಹೆಚ್ಚು ಅನುಕೂಲವಾಗಲಿವೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಭೇಟಿ ನೀಡಿದ ಸ್ಥಳಗಳಲ್ಲಿ ಸಿಬಿಎಸ್ಇ ಪಠ್ಯಕ್ರಮದ ನಾಲ್ಕು ‘ಕ್ರೈಸ್’ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದು ಘೋಷಿಸಲಾಗಿದ್ದು ಇದರಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಕೂಡ ಸೇರಿದೆ. ನೂರು ವರ್ಷಗಳ ಹಿಂದೆ ಅಂಬೇಡ್ಕರ್ ಅವರು ಪ್ರಕರಣವೊಂದರ ಕುರಿತು ವಾದಿಸಲು ಚಿಕ್ಕೋಡಿ ನ್ಯಾಯಾಲಯಕ್ಕೆ ಬಂದಿದ್ದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪನೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಸ್ಥ ಮಹಿಳೆಯರಿಗೆ ತಲಾ 50 ಸಂಖ್ಯಾಬಲದ ಎರಡು ವಸತಿ ನಿಲಯ ನಿರ್ಮಾಣ ಬೆಳಗುಂದಿಯಲ್ಲಿ ನೂತನ ಕುಸ್ತಿ ಅಖಾಡ ನಿರ್ಮಾಣ ಇವು ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಸಿಕ್ಕ ಪ್ರಮುಖ ಕೊಡುಗೆಗಳು. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ 150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು ಎಂದು ಹೇಳಲಾಗಿದೆ. ಇದರಲ್ಲಿ ಬೆಳಗಾವಿಯ ಹೆಸರೂ ಇದ್ದು ಎಷ್ಟು ವಸತಿನಿಲಯಗಳು ಎಂದು ಸ್ಪಷ್ಟವಾಗಿಲ್ಲ. ರಾಜ್ಯದ ಎರಡನೇ ಅತಿ ದೊಡ್ಡ ಜಿಲ್ಲೆಯಾದ ಬೆಳಗಾವಿಯಲ್ಲಿ ಇನ್ನೂ 15 ವಸತಿ ನಿಲಯಗಳ ಬೇಡಿಕೆ ಇದೆ.

ವಿದ್ಯುತ್ ರಿಯಾಯಿತಿ ಪ್ರೋತ್ಸಾಹ ಧನಕ್ಕೆ ಹರ್ಷ

ರಾಜ್ಯದ ನೇಕಾರರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಲು ಮತ್ತು ಅವರ ಜೀವನ ಮಟ್ಟವನ್ನು ಸುಧಾರಿಸಲು ‘ನೇಕಾರರ ಸಮ್ಮಾನ್ ಯೋಜನೆ’ಯಡಿ ₹225 ಕೋಟಿ ಅನುದಾನ ಮೀಸಲಿಟ್ಟ ಬಗ್ಗೆ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರೂ ಆಗಿರುವ ಮುಖಂಡ ರಮೇಶ ಸೊಂಟಕ್ಕಿ ಸಮಾಧಾನ ವ್ಯಕ್ಯಪಡಿಸಿದ್ದಾರೆ. ರಾಜ್ಯದ ಒಟ್ಟು 1.30 ಲಕ್ಷ ನೇಕಾರರಿಗೆ ವಾರ್ಷಿಕ ₹5000 ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಆದರೆ ಬೆಳಗಾವಿ ಜಿಲ್ಲೆಯಲ್ಲಿಯೇ 1.50 ಲಕ್ಷ ನೇಕಾರರು ಇರುವ ಕಾರಣ ಬಹುಪಾಲು ಜಿಲ್ಲೆಗೆ ಇದರ ಲಾಭವಾಗಲಿದೆ. ವಿದ್ಯುತ್ ಸಹಾಯಧನ ಯೋಜನೆಯಡಿ 01 ರಿಂದ 10 ಎಚ್.ಪಿ.ವರೆಗೆ ಉಚಿತವಾಗಿ ಮತ್ತು 10 ರಿಂದ 20 ಎಚ್.ಪಿ. ವರೆಗಿನ ಘಟಕಗಳಿಗೆ ರಿಯಾಯಿತಿ ದರದಲ್ಲಿ ವಿದ್ಯುತ್ ಒದಗಿಸುವುದು ಪರಿಶಿಷ್ಟರಾದ ನೇಕಾರರಿಗೆ 20 ಎಚ್.ಪಿ.ಯಿಂದ 200 ಎಚ್.ಪಿ. ವರೆಗಿನ ವಿದ್ಯುತ್ ಮಗ್ಗದ ಯೂನಿಟ್ಗೆ ಶೇ 50ರಷ್ಟು ಸಹಾಯಧನ ನೀಡುವ ಯೋಜನೆ ಜಾರಿಗೊಳಿಸಲಾಗಿದೆ.

- ಭದ್ರತಾ ಸಿಬ್ಬಂದಿ ಬ್ಯಾರಕ್ ನಿರ್ಮಾಣಕ್ಕೆ ₹20 ಕೋಟಿ

ನಗರದಿಂದ 12 ಕಿ.ಮೀ ದೂರದಲ್ಲಿರುವ ಸುವರ್ಣ ಸೌಧದಲ್ಲಿ ಪ್ರತಿ ವರ್ಷ ವಿಧಾನ ಮಂಡಲದ ಅಧಿವೇಶನ ನಡೆಯುತ್ತದೆ. ಆ ಸಮಯದಲ್ಲಿ ಬಂದೋಬಸ್ತ್ ಕಾರ್ಯಕ್ಕೆ ನಿಯೋಜಿಸಲಾಗುವ ಸಿಬ್ಬಂದಿಗೆ ವಸತಿ ಸೌಲಭ್ಯವನ್ನು ಒದಗಿಸುವುದಕ್ಕಾಗಿ ₹20 ಕೋಟಿ ವೆಚ್ಚದಲ್ಲಿ 1000 ಸಿಬ್ಬಂದಿಗಾಗಿ ಶಾಶ್ವತ ಬ್ಯಾರಕ್ಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಪ್ರತಿ ವರ್ಷ ವಸತಿಗಾಗಿ ಜರ್ಮನ್ ಟೆಂಟುಗಳನ್ನು ಹಾಕಲಾಗುತ್ತಿತ್ತು. ಇದರಿಂದ ಭದ್ರತಾ ಸಿಬ್ಬಂದಿ ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದರು. ತೀವ್ರ ಚಳಿಗಾಲದ ಕಾರಣ ಅನಾರೋಗ್ಯಕ್ಕೆ ಒಳಗಾಗುತ್ತಿದ್ದರು. ಇವರ ತಾತ್ಕಾಲಿಕ ವಸತಿಗಾಗಿಯೇ ₹2 ಕೋಟಿ ಹಣ ಪ್ರತಿ ವರ್ಷ ವೆಚ್ಚವಾಗುತ್ತಿತ್ತು. ಈವರೆಗಿನ 12 ಅಧಿವೇಶನಗಳಿಗಾಗಿ ಭದ್ರತಾ ಸಿಬ್ಬಂದಿ ಹಾಗೂ ಸರ್ಕಾರಿ ಸಿಬ್ಬಂದಿ ವಸತಿಗಾಗಿ ಸುಮಾರು ₹30 ಕೋಟಿಗೂ ಅಧಿಕ ಹಣ ಸುರಿಯಲಾಗಿದೆ. ಇದೀಗ ಭದ್ರತಾ ಸಿಬ್ಬಂದಿ ವಸತಿ ಸಮುಚ್ಛಯದ ಬೇಡಿಕೆ ಮಾತ್ರ ಈಡೇರಿದೆ. ಆದರೆ ಇದೇ ಸ್ಥಳದಲ್ಲಿ ಶಾಸಕರ ಭವನ ನಿರ್ಮಿಸುವ ಬೇಡಿಕೆ ಗಮನಕ್ಕೆ ತೆಗೆದುಕೊಂಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.