ಹಿರೇಬಾಗೇವಾಡಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಶು ಆಹಾರ ಸಾಗಿಸುತ್ತಿದ್ದ ಲಾರಿ ಭಾನುವಾರ ಬೆಳಿಗ್ಗೆ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.

ಮಹಾರಾಷ್ಟ್ರದ ಸಾಂಗ್ಲಿಯ ಕುಪವಾಡದಿಂದ ಮೈಸೂರಿಗೆ ಪಶು ಆಹಾರ ತುಂಬಿಕೊಂಡು ಹೊರಟಿದ್ದ ಲಾರಿಯ ಟೈರ್ಗೆ ಬೆಂಕಿ ಹೊತ್ತಿದ ಪರಿಣಾಮ ಈ ಅವಘಡ ಸಂಭವಿಸಿದೆ. ಪ್ರಾಣ ಹಾನಿಯಾಗಿಲ್ಲ. ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಧಾವಿಸಿ ಬೆಂಕಿ ನಂದಿಸಿದರು.

ಪಶು ಆಹಾರ ಯಾರಿಗೆ ಸೇರಿದ್ದು, ಎಷ್ಟು ಮೊತ್ತ ಎಂಬ ಮಾಹಿತಿ ಗೊತ್ತಾಗಿಲ್ಲ. ಹಿರೇಬಾಗೇವಾಡಿ ಪೊಲೀಸರು ಸ್ಥಳ ಪರಿಶೀಲಿಸಿದರು.