ಬೈಲಹೊಂಗಲ: ‘ಚನ್ನಮ್ಮನ ಕಿತ್ತೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ತರಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ಕ್ಷೇತ್ರದ ಪ್ರತಿಯೊಂದು ಗ್ರಾಮವೂ ಅಭಿವೃದ್ಧಿಯ ಹಾದಿಯಲ್ಲಿ ಸಾಗಬೇಕು ಎಂಬುದು ನನ್ನ ಗುರಿ. ಜನರ ಸಹಕಾರದಿಂದ ಮಾತ್ರ ಇದು ಸಾಧ್ಯ’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

ಸಮೀಪದ ಚನ್ನಮ್ಮನ ಕಿತ್ತೂರು ಮತಕ್ಷೇತ್ರದ ಸಂಪಗಾಂವ, ಯರಡಾಲ, ಸುತಗಟ್ಟಿ, ದಾಸ್ತಿಕೊಪ್ಪ, ಹುಣಶೀಕಟ್ಟಿ, ದೇವರಶೀಗಹಳ್ಳಿ, ದೇಮಟ್ಟಿ, ಉಗರಖೋಡ ಸೇರಿದಂತೆ ಹಲವು ಗ್ರಾಮಗಳಲ್ಲಿ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಗ್ರಾಮೀಣ ಭಾಗದ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಈ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಸರ್ಕಾರದ ವಿವಿಧ ಯೋಜನೆಗಳಡಿ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು, ಕ್ಷೇತ್ರದಲ್ಲಿ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದರು.

‘ಈ ಭಾಗದ ಗ್ರಾಮಸ್ಥರು ಕಳೆದ ಹಲವು ವರ್ಷಗಳಿಂದ ಉತ್ತಮ ರಸ್ತೆ ಸೌಲಭ್ಯಕ್ಕಾಗಿ ನಿರಂತರವಾಗಿ ಬೇಡಿಕೆ ಸಲ್ಲಿಸುತ್ತಿದ್ದರು. ಅವರ ನಿರೀಕ್ಷೆ ಇಂದು ಈಡೇರಿಸುವ ಹಂತಕ್ಕೆ ಬಂದಿದೆ ಎಂಬುದು ನನಗೆ ಅತ್ಯಂತ ಸಂತೋಷದ ವಿಷಯವಾಗಿದೆ. ಗ್ರಾಮೀಣ ಸಂಪರ್ಕ ಸುಧಾರಿಸಿದರೆ ಆರ್ಥಿಕ ಚಟುವಟಿಕೆಗಳು ವೇಗ ಪಡೆಯುತ್ತವೆ’ ಎಂದರು.

ವಿವಿಧ ಗ್ರಾಮಗಳ ಮುಖಂಡರು ಹಾಗೂ ಹಿರಿಯರು ಶಾಸಕ ಬಾಬಾಸಾಹೇಬ ಪಾಟೀಲ ಅವರನ್ನು ಸನ್ಮಾನಿಸಿದರು. ಚನ್ನಮ್ಮನ ಕಿತ್ತೂರು ಮತಕ್ಷೇತ್ರದ ಸಂಪಗಾಂವ ಗ್ರಾಮದಲ್ಲಿ ಎರಡು ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಬಾಬಾಸಾಹೇಬ ಪಾಟೀಲ ಸಮ್ಮುಖದಲ್ಲಿ ಗ್ರಾಮಸ್ಥರು ಭೂಮಿಪೂಜೆ ನೆರವೇರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-21-671501954

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.