ಬೆಳಗಾವಿ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡಗಳಿಗೂ ಅಧಿಕಾರಿಗಳು ಪಿಐಡಿ ಸಂಖ್ಯೆ ನೀಡುತ್ತಿದ್ದಾರೆ. ಅಕ್ರಮ ಎಸಗಿದ ಅಧಿಕಾರಿಗಳ ವಿರುದ್ಧ ದೂರು ನೀಡಿದರೂ ಕ್ರಮ ವಹಿಸಿಲ್ಲ ಎಂಬ ವಿಷಯ, ಶನಿವಾರ ನಡೆದ ಪಾಲಿಕೆ ಪರಿಷತ್ ಸಭೆಯಲ್ಲಿ ಗದ್ದಲಕ್ಕೆ ಕಾರಣವಾಯಿತು.

ಮೇಯರ್ ಪ್ರೀತಿ ಕಾಮಕರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಪರಿಷತ್ ಸಭೆಯಲ್ಲಿ ಸದಸ್ಯ ರವಿ ಧೋತ್ರೆ ಈ ವಿಷಯ ಪ್ರಸ್ತಾಪಿಸಿದರು.

ನಗರದಲ್ಲಿ 45ಕ್ಕೂ ಹೆಚ್ಚು ಅನಧಿಕೃತ ಕಟ್ಟಡಗಳಿಗೆ ಅಧಿಕಾರಿಗಳು ಪಿಐಡಿ ಸಂಖ್ಯೆ ನೀಡಿ ಅಕ್ರಮ ಎಸಗಿದ್ದಾರೆ. ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರೂ ಕಾಲಹರಣ ಮಾಡುತ್ತಿರುವುದು ಏಕೆ ಎಂದು ಪಾಲಿಕೆ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ದನಿಗೂಡಿಸಿದ ಸದಸ್ಯರಾದ ಸಾರಿಕಾ ಪಾಟೀಲ, ‘ಎಲ್ಲ ದಾಖಲೆಗಳು ಸರಿಯಾಗಿದ್ದರೂ ಸಾಮಾನ್ಯ ನಾಗರಿಕರು ಖಾತಾ ಮತ್ತು ಪಿಐಡಿ ಪಡೆಯಲು ಅಧಿಕಾರಿಗಳು ಅಲೆದಾಡಿಸುತ್ತಾರೆ. ಆದರೆ, ಲಂಚ ನೀಡುವವರ ಅಕ್ರಮ ಆಸ್ತಿಗಳಿಗೆ ಯಾವುದೇ ಅಡಚಣೆ ಇಲ್ಲದೇ ರಾಜಾರೋಷವಾಗಿ ಪಿಐಡಿ ನೀಡಲಾಗುತ್ತಿದೆ’ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮಹಾನಗರ ಪಾಲಿಕೆಯಲ್ಲಿ ಏಜೆಂಟ್ಗಳ ಹಾವಳಿ ಹೆಚ್ಚಾಗಿದೆ ಎಂದೂ ಸದಸ್ಯರು ಆರೋಪ ಮಾಡಿದರು.

‘ಪಾಲಿಕೆಯ ಕೆಲ ಅಧಿಕಾರಿಗಳು ಲಂಚಬಾಕರಾಗಿ ಸಾರ್ವಜನಿಕರಿಂದ ಹಣ ಹೀರುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬರುತ್ತಿವೆ. ಆದರೆ, ಸಂಬಂಧಪಟ್ಟವರು ಇಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಸದಸ್ಯೆ ವಾಣಿ ಜೋಶಿ ಆಕ್ಷೇಪ ವ್ಯಕ್ತಪಡಿಸಿದರು.

‘ಇ-ಖಾತಾ ಮಾಡಿಸುವುದಕ್ಕೆ ಪಾಲಿಕೆ ಅಧಿಕಾರಿಯೊಬ್ಬರು ಸಾರ್ವಜನಿಕರಿಂದ ₹1 ಲಕ್ಷ ಲಂಚ ಕೇಳಿದ ಬಗ್ಗೆ ಈಗಾಗಲೇ ದಾಖಲೆ ಸಹಿತ ದೂರು ನೀಡಿದರೂ ಈ ತನಕ ಯಾವುದೇ ಕ್ರಮ ಆಗಿಲ್ಲ ಯಾಕೆ?’ ಎಂದೂ ಪ್ರಶ್ನಿಸಿದರು.

ಈ ವೇಳೆ ಮಾತನಾಡಿದ ಸಿದ್ದು ಹುಲ್ಲೊಳ್ಳಿ, ‘ಪ್ರಕರಣವು ಸದ್ಯ ತನಿಖಾ ಹಂತದಲ್ಲಿದ್ದು, ನಾಲ್ವರ ವಿರುದ್ಧ ಇಲಾಖಾ ಮಟ್ಟದ ತನಿಖೆ ನಡೆಯಲಿದೆ’ ಎಂದು ಮಾಹಿತಿ ನೀಡಿದರು.

ಇದರಿಂದ ಕೆರಳಿದ ಸದಸ್ಯರು, ‘ಆರೋಪ ಎದುರಿಸುವವರನ್ನೇ ತನಿಖಾಧಿಕಾರಿಯನ್ನಾಗಿ ಮಾಡಿದ್ದೀರಿ. ಅವರಿಂದ ನ್ಯಾಯ ನಿರೀಕ್ಷೆ ಮಾಡುವುದು ಎಷ್ಟರ ಮಟ್ಟಿಗೆ ಸರಿ’ ಎಂದು ಮರುಪ್ರಶ್ನೆ ಹಾಕಿದರು.

ಇದರಿಂದ ಸಭೆಯಲ್ಲಿ ಕೋಲಾಹಲ ನಿರ್ಮಾಣವಾಯಿತು. ಪ್ರಕರಣದ ಕುರಿತು ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಸದಸ್ಯರು ಒತ್ತಾಯಿಸಿದರು.

‘ಸದಸ್ಯರ ದೂರುಗಳನ್ನು ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ’ ಪಾಲಿಕೆ ಆಯುಕ್ತ ಕಾರ್ತಿಕ ಭರವಸೆ ನೀಡಿ ಎಲ್ಲರನ್ನೂ ಶಾಂತ ಮಾಡಿದರು.

ಉಪಮೇಯರ್ ಹನುಮಂತ ಕೊಂಗಾಲಿ, ಶಾಸಕ ಅಭಯ ಪಾಟೀಲ, ವಿಧಾನ ಪರಿಷತ್ ಸದಸ್ಯ ಸಾಬಣ್ಣ ತಳವಾರ ಮುಂತಾದವರು ಚರ್ಚೆಯಲ್ಲಿ ಪಾಲ್ಗೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-21-1958993670

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.