ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ಬಹುತೇಕ ಕೊನೆ ಹಂತದಲ್ಲಿದ್ದು, ಈವರೆಗಿನ ಮಾಹಿತಿ ಪ್ರಕಾರಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ.
58 ವಾರ್ಡ್ ಗಳಲ್ಲಿ 35ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಪಾಲಿಕೆಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಈ ಬಾರಿ ಪಕ್ಷದ ಚಿಹ್ನೆ ಮೇಲೆ ಚುನಾವಣೆ ನಡೆದಿತ್ತು. ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಮಹಾರಾಷ್ಟ್ರ ಏಕೀಕರಣ ಸಮಿತಿಯು ನಿರ್ಮಾಮವಾಗಿದೆ. ಆ ಸಮಿತಿಯ ಬೆಂಬಲಿತ ಮೂವರು ಅಭ್ಯರ್ಥಿಗಳು ಮಾತ್ರ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಗಡಿ ನಾಡಿನಲ್ಲಿ ಭಾಷಾ ರಾಜಕಾರಣ ಈಗ ಅಂತ್ಯವಾದಂತಾಗಿದೆ. ಎಐಎಂಐಎಂ ಪಕ್ಷ ಖಾತೆ ತೆರೆದಿದೆ. ಕಾಂಗ್ರೆಸ್ 10ಸ್ಥಾನಗಳನ್ನು ಗೆದ್ದಿದೆ. ಪಕ್ಷೇತರರು 12ವಾರ್ಡ್‌ಗಳಲ್ಲಿ ಗೆದ್ದಿದ್ದಾರೆ.
ಫಲಿತಾಂಶ ವಿವರ...
ಬಿಜೆಪಿ–35
ಕಾಂಗ್ರೆಸ್–10
ಪಕ್ಷೇತರರು: 12
ಎಐಎಂಐಎಂ: 1
ಇವನ್ನೂ ಓದಿ...
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.