ಬೆಳಗಾವಿ: ‘ಉತ್ತರ ಕರ್ನಾಟಕದ ಒಂಬತ್ತು ಜಿಲ್ಲೆಗಳಲ್ಲಿ ಈ ವರ್ಷ ಶೇ 95ರಷ್ಟು ಹೆಚ್ಚು ಮಳೆಯಾಗಿದೆ. ಜಿಲ್ಲೆಯೊಂದರಲ್ಲಿ 80 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ಸಮೀಕ್ಷೆ ನಡೆಸಲಾಗುತ್ತಿದ್ದು, ರೈತರಿಗೆ ಶೀಘ್ರ ಪರಿಹಾರ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಲ್ಲಿನ ಜಿಲ್ಲಾಸ್ಪತ್ರೆ ಆವರಣದಲ್ಲಿ ₹120 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ, ಗೃಹವೈದ್ಯರ ವಸತಿ ನಿಲಯದ ಶಂಕುಸ್ಥಾಪನೆ, ಸ್ಮಾರ್ಟ್ಸಿಟಿ ಅಡಿ ನಿರ್ಮಿಸಿದ ಬಸ್ ನಿಲ್ದಾಣ ಉದ್ಘಾಟನೆ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ಪಿಎಂ ಉಷಾ (ಮೇರು) ಕಟ್ಟಡ ಕಾಮಗಾರಿಗಳು ಮತ್ತು ವಿ.ವಿ ರಸ್ತೆ ನಿರ್ಮಾಣ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.

‘ಬೆಳೆಹಾನಿಯಾಗಿದ್ದರೆ ಖುಷ್ಕಿ ಜಮೀನಿಗೆ ಹೆಕ್ಟೇರ್ಗೆ ₹17 ಸಾವಿರ, ನೀರಾವರಿಗೆ ₹21.5 ಸಾವಿರ, ಬಹುಬೆಳೆಗೆ ₹31 ಸಾವಿರ ಪರಿಹಾರ ನೀಡಲಾಗುವುದು. ಇದರಲ್ಲಿ ಎನ್ಡಿಆರ್ಎಫ್ ಅರ್ಧ ಹಾಗೂ ರಾಜ್ಯ ಸರ್ಕಾರ ಅರ್ಧ ಹಣ ನೀಡಲಿದೆ’ ಎಂದರು.

‘ನನೆಗುದಿಗೆ ಬಿದ್ದಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಆರಂಭಿಸಲಾಗಿದೆ. ಬಡವರಿಗೂ ಉಚಿತವಾಗಿ ಅತ್ಯಾಧುನಿಕ ವೈದ್ಯಕೀಯ ಸೇವೆ ನೀಡುವುದು ನಮ್ಮ ಉದ್ದೇಶ’ ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಶಾಸಕ ಆಸಿಫ್ ಸೇಠ್ ಮಾತಾಡಿದರು.

ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ, ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ, ರಾಜ್ಯ ಹಣಕಾಸು ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಕೌಜಲಗಿ, ವಾಯವ್ಯ ಸಾರಿಗೆ ಸಂಸ್ಥೆಯ ಅಧ್ಯಕ್ಷ ಭರಮಗೌಡ ಕಾಗೆ, ಶಾಸಕ ಬಾಬಾಸಾಹೇಬ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ನಾಗರಾಜ ಯಾದವ, ಚನ್ನರಾಜ ಹಟ್ಟಿಹೊಳಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಹಾಗೂ ಅಧಿಕಾರಿಗಳು ವೇದಿಕೆ ಇದ್ದರು.

ಬಡವರಿಗೆ ಕೈಗೆಟುಕುವ ದರದಲ್ಲಿ ಉತ್ತಮ ಚಿಕಿತ್ಸೆ ಬಿಮ್ಸ್ನಲ್ಲಿ ಲಭಿಸಲಿದೆ. ವೈದ್ಯರು ಮತ್ತು ಸಿಬ್ಬಂದಿಯನ್ನು ಹಂತ ಹಂತವಾಗಿ ನೇಮಕ ಮಾಡಲಾಗುವುದು.
– ಸತೀಶ ಜಾರಕಿಹೊಳಿ, ಸಚಿವ ಜಿಲ್ಲಾ ಉಸ್ತುವಾರಿ ಸಚಿವ

ಸದ್ಯ ಕೆಎಲ್ಇ ಆಸ್ಪತ್ರೆಯ ವೈದ್ಯರೇ ಉಚಿತವಾಗಿ ಚಿಕಿತ್ಸೆ ನೀಡಲು ಮುಂದೆ ಬಂದಿದ್ದಾರೆ. ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ.
– ಡಾ.ಶರಣಪ್ರಕಾಶ ಪಾಟೀಲ, ವೈದ್ಯಕೀಯ ಶಿಕ್ಷಣ ಸಚಿವ

ಸರ್ಕಾರಿ ಆಸ್ಪತ್ರೆ ಬಸ್ ನಿಲ್ದಾಣ ಸೇರಿದಂತೆ ಎಲ್ಲ ಸರ್ಕಾರಿ ಆಸ್ತಿಗಳ ರಕ್ಷಣೆ ಜನರ ಜವಾಬ್ದಾರಿ. ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಸರ್ಕಾರದೊಂದಿಗೆ ಜನರೂ ಕೈಜೋಡಿಸಬೇಕು.
– ಲಕ್ಷ್ಮೀ ಹೆಬ್ಬಾಳಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ

‘ನಗರಕ್ಕೆ ನೂರು ಎಲೆಕ್ಟ್ರಿಕ್ ಬಸ್’

‘ಸ್ಮಾರ್ಟ್ಸಿಟಿ ಯೋಜನೆಯಡಿ ನಗರದ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಶೀಘ್ರವೇ 100 ಎಲೆಕ್ಟ್ರಿಕ್ ಬಸ್ಗಳನ್ನು ನಗರಕ್ಕೆ ನೀಡಲಾಗುವುದು’ ಎಂದು ಸಿದ್ದರಾಮಯ್ಯ ತಿಳಿಸಿದರು.

‘ಶಿಕ್ಷಣದಿಂದ ಸ್ವತಂತ್ರರಾಗಲು ಸಾಧ್ಯ. ಹಿಂದುಳಿದವರು ಪರಿಶಿಷ್ಟರು ಉನ್ನತ ಶಿಕ್ಷಣ ಪಡೆದುಕೊಳ್ಳಬೇಕು ಎಂಬ ಉದ್ದೇಶದಿಂದ ವಿ.ವಿ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ’ ಎಂದರು.

‘₹9 ಕೋಟಿ ವೆಚ್ಚದಲ್ಲಿ ವಿ.ವಿಗೆ ರಸ್ತೆ’

‘ರಾಣಿ ಚನ್ನಮ್ಮ ವಿ. ಕಟ್ಟಡ ಕಾಮಗಾರಿ ಮುಕ್ತಾಯದ ಹಂತದಲ್ಲಿವೆ. ಪಿಎಂ– ಉಷಾ (ಮೇರು) ಯೋಜನೆಯಡಿ ಸಂಶೋಧನೆ ಮತ್ತು ಕೌಶಲ್ಯಾಭಿವೃದ್ಧಿಗಾಗಿ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಲೋಕೋಪಯೋಗಿ ಇಲಾಖೆಯಿಂದ ₹9 ಕೋಟಿ ವೆಚ್ಚದಲ್ಲಿ ಹೆದ್ದಾರಿಯಿಂದ ವಿ.ವಿ.ಗೆ ಸಂಪರ್ಕ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಹೇಳಿದರು.

‘ಕೌಶಲ ಅಭಿವೃದ್ಧಿ ಹಾಗೂ ತಾಂತ್ರಿಕ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ₹2500 ಕೋಟಿ ವೆಚ್ಚದಲ್ಲಿ ಕೌಶಲ ತರಬೇತಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಕೂಡ ಶೀಘ್ರ ಆರಂಭವಾಗಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.