ಗುರುವಾರ , ಜೂನ್ 30, 2022
27 °C

ಬೆಳಗಾವಿ: ವಿಚಕ್ಷಣೆಯಲ್ಲಿ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ ಆಯೋಜಿಸಿರುವ ಸ್ಪರ್ಧಾತ್ಮಕ ಪರೀಕ್ಷೆಯು ನಗರವೂ ಸೇರಿದಂತೆ ಜಿಲ್ಲೆಯ 52 ಕೇಂದ್ರಗಳಲ್ಲಿ ಶನಿವಾರ ಆರಂಭಗೊಂಡಿದೆ.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 11,199 ಮತ್ತು ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 5,967 ಅಭ್ಯರ್ಥಿಗಳು ನೋಂದಾಯಿಸಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮದ ಹಿನ್ನೆಲೆಯಲ್ಲಿ ಭಾರಿ ನಿಗಾ ಹಾಗೂ ‌ವಿಚಕ್ಷಣೆಯಲ್ಲಿ ಈ‌ ಪರೀಕ್ಷೆ ನಡೆಸಲಾಗುತ್ತಿದೆ. ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಪರೀಕ್ಷಾ ಚಟುವಟಿಕೆಗಳ ರೆಕಾರ್ಡಿಂಗ್ ಮಾಡಲಾಗುತ್ತಿದೆ. ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಮೊದಲಾದ ಎಲೆಕ್ಟ್ರಾನಿಕ್ ಸಾಧನಗಳನ್ನು ಕೇಂದ್ರಕ್ಕೆ ಒಯ್ಯಲು ಅವಕಾಶ ನೀಡಿಲ್ಲ. ಪ್ರತಿ ಕೊಠಡಿಯಲ್ಲಿ 20 ಅಭ್ಯರ್ಥಿಗಳಿಗೆ ಮಾತ್ರ ಅನುವು ಮಾಡಿಕೊಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಅಭ್ಯರ್ಥಿಗಳನ್ನು ಪರಿಶೀಲನೆಗೆ ಒಳಪಡಿಸಿದ ನಂತರ ಕೇಂದ್ರಕ್ಕೆ ಪ್ರವೇಶ ನೀಡಲಾಯಿತು. ವಿವಿಧ ಜಿಲ್ಲೆಗಳಿಂದ ಬಂದಿರುವ ಅಭ್ಯರ್ಥಿಗಳು ಇಲ್ಲಿ ಪರೀಕ್ಷೆಗೆ ಹಾಜರಾಗಿದ್ದಾರೆ. ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ‌ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷೆಯು ಭಾನುವಾರವೂ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು