ಬೆಳಗಾವಿ: ‘ಕಾಂಗ್ರೆಸ್ ಸರ್ಕಾರಕ್ಕೆ ಸಾಧನಾ ಸಮಾವೇಶ ಮಾಡುವ ಅರ್ಹತೆ ಇಲ್ಲ. ಮೊದಲು ರಾಜ್ಯದ ಜನರ ಪ್ರಶ್ನೆಗಳಿಗೆ ಉತ್ತರ ನೀಡಿ, ನಂತರ ಸಮಾವೇಶ ಮಾಡಿ’ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಆಗ್ರಹಿಸಿದರು.

‘ತುಮಕೂರಿನಲ್ಲಿ ಕಾಂಗ್ರೆಸ್ ಆಯೋಜಿಸಿರುವ ‘ಸಾಧನಾ ಸಮಾವೇಶ’ಕ್ಕೆ ಅರ್ಥವಿಲ್ಲ. ರಾಜ್ಯದಲ್ಲಿ ಯಾವ ಸಾಧನೆ ಮಾಡಲಾಗಿದೆ ಎಂಬುದನ್ನು ಮೊದಲು ಜನರಿಗೆ ತಿಳಿಸಲಿ. ಅಕಾಲಿಕ ಮಳೆಯಿಂದ ಅನೇಕ ಜಿಲ್ಲೆಗಳಲ್ಲಿ ರೈತರ ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿವೆ. ಜನರು ಸಂಕಷ್ಟದಲ್ಲಿದ್ದರೂ ಸಚಿವರು ಜಿಲ್ಲೆಗಳಲ್ಲೇ ಕಾಣಿಸುತ್ತಿಲ್ಲ’ ಎಂದು ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಕಿಡಿ ಕಾರಿದರು.

‘ಯಾವ ಜಿಲ್ಲಾ ಉಸ್ತುವಾರಿ ಸಚಿವ ಯಾವ ಜಿಲ್ಲೆಯಲ್ಲಿ ಇದ್ದಾರೆ ಎಂಬುದೇ ಜನರಿಗೆ ಗೊತ್ತಾಗುತ್ತಿಲ್ಲ. ಕೆಲವರು ಕೇರಳದಲ್ಲಿದ್ದಾರೆ, ಕೆಲವರು ದೆಹಲಿಯಲ್ಲಿ ತಿರುಗುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರನ್ನು ಹುಡುಕಿಕೊಡಿ ಎಂದು ಜಾಹೀರಾತು ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದರು.

‘ಕಾಂಗ್ರೆಸ್ ಶಾಸಕರು ಮತ್ತು ಸಚಿವರು ಜನರ ಮಧ್ಯೆ ಹೋಗಿ ಸಮಸ್ಯೆ ಆಲಿಸುವ ಕೆಲಸ ಮಾಡುತ್ತಿಲ್ಲ. ಶಾಸಕರಿಗೂ ಕ್ಷೇತ್ರಾಭಿವೃದ್ಧಿಗೆ ಬೇಕಾದಷ್ಟು ಅನುದಾನ ಬಿಡುಗಡೆ ಮಾಡುತ್ತಿಲ್ಲ. ಆಡಳಿತ ಯಂತ್ರವೇ ನಿರ್ಲಕ್ಷ್ಯಕ್ಕೆ ಒಳಗಾಗಿದೆ’ ಎಂದು ಟೀಕಿಸಿದರು.

‘ಬೆಳಗಾವಿಯಲ್ಲಿ ಇಬ್ಬರು ಪ್ರಭಾವಿ ಸಚಿವರಿದ್ದರೂ ನಗರದ ಸಮಸ್ಯೆಗಳು ಬಗೆಹರಿಯುತ್ತಿಲ್ಲ. ಚಳಿಗಾಲ ಅಧಿವೇಶನ ನಡೆಸುವುದಾದರೆ ಬೆಳಗಾವಿಯ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಬೇಕು. ಕೇವಲ ಮನವಿ ಸ್ವೀಕರಿಸಲು ಮಾತ್ರ ಅಧಿವೇಶನ ನಡೆಸಬಾರದು’ ಎಂದರು.

ಮಾಜಿ ಶಾಸಕ ಸಂಜಯ ಪಾಟೀಲ, ಮುಖಂಡರಾದ ಡಿ.ಎಸ್ ಅರುಣ, ಭಾರತಿ ಮಗದುಮ್, ಮುರುಘೇಂದ್ರಗೌಡ ಪಾಟೀಲ, ಸಿದ್ದನಗೌಡ ಪಾಟೀಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-21-1910117706

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.