ಬೆಳಗಾವಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಸಂಸದ ಶೆಟ್ಟರ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಕನ್ನಡ ಸಾಹಿತ್ಯ ಭವನದಿಂದ ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕಾರ್ತಿಕ ಪಾಟೀಲ ನೇತೃತ್ವದಲ್ಲಿ ಪ್ರತಿಭಟನೆ ಆರಂಭಿಸಲಾಯಿತು. ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ, ಶೆಟ್ಟರ್ ಕಚೇರಿಗೆ ನುಗ್ಗಲು ಯತ್ನಿಸಿದರು. ಪೊಲೀಸರು ಬ್ಯಾರಿಕೇಡ್ ಹಾಕಿ ಪ್ರತಿಭಟನಕಾರರನ್ನು ತಡೆದರು. ಈ ವೇಳೆ ಮಾತಿನ ಚಕಮಕಿ ನಡೆಯಿತು. 20 ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಕಾರ್ತಿಕ ಪಾಟೀಲ ಮಾತನಾಡಿ, ‘ಪ್ರಶ್ನೆ ಪತ್ರಿಕೆ ಸೋರಿಕೆಯ ವೈಫಲ್ಯವನ್ನು ಕೇಂದ್ರ ಸರ್ಕಾರ ಹೊರಬೇಕಾಗಿದೆ. ಪ್ರಧಾನಿ ನರೇಂದ್ರ ಮೋದಿ ಆಡಳಿತ ಅವಧಿಯಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಇದೊಂದು ಕಪ್ಪುಚುಕ್ಕೆಯಾಗಿದೆ’ ಎಂದು ಆಕ್ರೋಶ ಹೊರಹಾಕಿದರು.

ಯುವ ಕಾಂಗ್ರೆಸ್ ಸಮಿತಿಯ ರಾಜ್ಯ ಘಟಕದ ಉಪಾಧ್ಯಕ್ಷ ಅಬ್ದುಲ್ ದೇಸಾಯಿ ಮಾತನಾಡಿ, ‘ನೀಟ್ಗೆ ಸಂಬಂಧಿಸಿ 70 ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಅಂದರೆ, ಕೇಂದ್ರ ಸರ್ಕಾರಕ್ಕೆ ಯುವಕರ ಭವಿಷ್ಯದ ಮೇಲೆ ಕಾಳಜಿಯಿಲ್ಲ. ಚುನಾವಣೆ ಮಾಡುವುದು, ಸುಳ್ಳು ಹೇಳುವುದು, ಹಿಂದೂ– ಮುಸ್ಲಿಂ ಗಲಾಟೆ ಮಾಡಿಸುವುದು ಬಿಟ್ಟರೆ ಮೋದಿಯವರಿಗೆ ವಿದ್ಯಾರ್ಥಿಗಳ ಮೇಲೆ ಕಿಂಚಿತ್ತೂ ಅಭಿಮಾನ ಇಲ್ಲ’ ಎಂದು ಕಿಡಿ ಕಾರಿದರು.

ಪವನ ನಾಯಕ, ಅನಿಕೇತ ಪಠಾಣ, ಸುನೀಲ ಹಲಗಿ, ಶಿವಕುಮಾರ್ ಹಂಪನವರ್, ಅಪ್ತಾಬ್ ಕಮತನೂರ, ವಿಷ್ಣು ಕಾರದಾರಿ, ಅನೀಶ ಕೌಜಲಗಿ, ಪ್ರಿತಮ್ ಬೆಳಗಾವಿ, ದಾದಾಪೀರ ಜಮಾದಾರ, ಮಂಜುನಾಥ ಪೋತನ್ನವರ, ಹರ್ತಕ ಅಲಿ, ಮಡಿವಾಳಪ್ಪ ಅಕ್ಕಿಸಾಗರ ನೇತೃತ್ವ ವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-21-1915064948

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.