ಬೆಳಗಾವಿ: ‘ಕೇಂದ್ರ ಸರ್ಕಾರ ಅನುಷ್ಠಾನ ಮಾಡಲು ಹೊರಟಿರುವ ಕ್ಷೇತ್ರ ಪುನರ್ವಿಂಗಡಣೆಯಿಂದ ಪ್ರತಿನಿಧಿಗಳ ಸಂಖ್ಯೆ ಹೆಚ್ಚಲಿದೆ. ಇದು ಪ್ರಗತಿಗೆ ಪೂರಕವಾಗಲಿದೆ’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘131ನೇ ಸಂವಿಧಾನ ತಿದ್ದುಪಡಿ ಮಸೂದೆ ಹಾಗೂ ಕ್ಷೇತ್ರ ಮರುವಿಂಗಡಣೆ ಮಸೂದೆ–2026 ಮಹಿಳಾ ಮೀಸಲಾತಿ ಜಾರಿಗೆ ಪ್ರಮುಖ ಘಟ್ಟವಾಗಲಿದೆ. ಈ ಮಸೂದೆಗಳ ಪ್ರಕಾರ ಲೋಕಸಭಾ ಸ್ಥಾನಗಳನ್ನು 545ರಿಂದ 850ಕ್ಕೆ ಹೆಚ್ಚಿಸುವ ಪ್ರಸ್ತಾವ ಇದೆ’ ಎಂದರು.

‘ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆ ನಡೆಸುವ ಮೂಲಕ ಸಮಾನ ಪ್ರತಿನಿಧಿತ್ವ ಕಲ್ಪಿಸುವ ಉದ್ದೇಶ ಹೊಂದಲಾಗಿದೆ. ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗುವ ಆತಂಕ ವ್ಯಕ್ತವಾಗಿದ್ದರೂ ಯಾವುದೇ ರಾಜ್ಯಕ್ಕೂ ಹಾನಿಯಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಕ್ಷೇತ್ರ ಮರುವಿಂಗಡಣೆ ಮಂಡಳಿ ರಚನೆ, ದೇಶವ್ಯಾಪಿ ಜನಗಣತಿ ಪೂರ್ಣಗೊಳಿಸುವುದು ಹಾಗೂ ನಂತರ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ ಈ ಮೂರು ಹಂತಗಳು ಪೂರ್ಣಗೊಂಡ ಬಳಿಕ; ನಾರಿಶಕ್ತಿ ವಂದನಾ ಕಾಯ್ದೆ ಪೂರ್ಣ ಪ್ರಮಾಣದಲ್ಲಿ ಜಾರಿಯಾಗಲಿದೆ. ಇದರೊಂದಿಗೆ ಭವಿಷ್ಯದಲ್ಲಿ 181 ಮಹಿಳಾ ಸಂಸದರ ಪ್ರವೇಶ ಸಾಧ್ಯವಾಗಲಿದ್ದು, ಅದುವರೆಗೆ ಹೋರಾಟ ನಿರಂತರವಾಗಿರಲಿದೆ. ಆದರೆ, ಕಾಯ್ದೆ ವಿರೋಧಿಸಿದ್ದು ಸರಿಯಾದ ಕ್ರಮವಲ್ಲ’ ಎಂದು ತಿಳಿಸಿದರು.

ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಶಾಂಭವಿ ಅಶ್ವತಪುರ, ಅಖಲಿ ಭಾರತ ವೀರಶೈವ ಮಹಾಸಭೆ ಜಿಲ್ಲಾ ಘಟಕ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ, ರೇಣುಕಾ ಹೂಗಾರ, ಜ್ಯೋತಿ ಬದಾಮಿ, ಶಕುಂತಲಾ ದೊನವಡೆ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-21-772753802

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.