ಶುಕ್ರವಾರ, ಫೆಬ್ರವರಿ 26, 2021
31 °C

ಬೆಳಗಾವಿ: ಜಿಲ್ಲೆಯಲ್ಲಿ ಬಸ್ ಸಂಚಾರ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ನಗರವೂ ಸೇರಿದಂತೆ ಜಿಲ್ಲೆಯ ಯಾವುದೇ ಕಡೆಗಳಿಗೂ ಸಾರಿಗೆ ಬಸ್‌ಗಳ ಸಂಚಾರಕ್ಕೆ ಲಾಕ್‌ಡೌನ್‌ನಿಂದ ವಿನಾಯಿತಿ ಸಿಕ್ಕಿಲ್ಲ. ಹೀಗಾಗಿ ಮೇ 4ರಿಂದ ಬಸ್‌ಗಳ ಕಾರ್ಯಾಚರಣೆ ಇರುವುದಿಲ್ಲ’ ಎಂದು ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಮಹಾದೇವಪ್ಪ ಮುಂಜಿ ತಿಳಿಸಿದರು.

ಭಾನುವಾರ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಕೇಂದ್ರದ ಮಾರ್ಗಸೂಚಿ ಪ್ರಕಾರ ಜಿಲ್ಲೆಯು ಕಿತ್ತಳೆ ವಲಯ (ಆರೆಂಜ್ ಝೋನ್)ದಲ್ಲಿದೆ. ಹೀಗಾಗಿ ಬಸ್‌ಗಳ ಸಂಚಾರಕ್ಕೆ ಅನುಮತಿ ಸಿಕ್ಕಿಲ್ಲ. ವಿಶೇಷ ಸಂದರ್ಭ ಹೊರತುಪಡಿಸಿದರೆ ಇಲ್ಲಿಗೆ ಬೇರೆ ಕಡೆಗಳಿಂದ ಬಸ್‌ಗಳು ಬರುವುದಕ್ಕೂ ಅವಕಾಶವಿಲ್ಲ’ ಎಂದು ಹೇಳಿದರು.

‘ಬಸ್‌ಗಳನ್ನು ಸ್ಯಾನಿಟೈಸ್ ಮಾಡಿ ಸಿದ್ಧತೆ ನಡೆಸಲಾಗುತ್ತಿದೆ. ಸರ್ಕಾರದಿಂದ ಆದೇಶ ಬಂದ ಕೂಡಲೇ ಕಾರ್ಯಾಚರಣೆ ಆರಂಭಿಸಲಾಗುವುದು’ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು