ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್–19 ವೈದ್ಯಕೀಯ ಸಿಬ್ಬಂದಿಗಿಲ್ಲ ಕೊಠಡಿ ವ್ಯವಸ್ಥೆ

Last Updated 12 ಜೂನ್ 2020, 15:52 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಬಿಮ್ಸ್‌ ಆಸ್ಪತ್ರೆಯ ಕೋವಿಡ್–19 ವಿಭಾಗಕ್ಕೆ ನಿಯೋಜಿಸಿರುವ ವೈದ್ಯಕೀಯ ಸಿಬ್ಬಂದಿ ಮನೆಗಳಿಗೆ ಹೋಗಿ ಬಂದು ಕಾರ್ಯನಿರ್ವಹಿಸಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ. ಇದು, ಸಿಬ್ಬಂದಿ ಹಾಗೂ ಕುಟುಂಬದವರ ಆತಂಕಕ್ಕೆ ಕಾರಣವಾಗಿದೆ.

ಈ ಮೊದಲು, ಹೋಟೆಲ್‌ನಲ್ಲಿ ಉಳಿದುಕೊಳ್ಳಲು ಅವರಿಗೆ ಜಿಲ್ಲಾಡಳಿತದಿಂದ ವ್ಯವಸ್ಥೆ ಮಾಡಲಾಗಿತ್ತು.

‘ನಮ್ಮನ್ನು ಹೋಟೆಲ್‌ ಕೊಠಡಿಗಳಿಂದ ಖಾಲಿ ಮಾಡಲು ತಿಳಿಸಲಾಗಿದೆ. ಕೆಲವು ದಿನಗಳವರೆಗಾದರೂ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಲು ಅನುಕೂಲ ಮಾಡಿಕೊಡಬೇಕಿತ್ತು. ಇದರಿಂದ ಆತಂಕಕ್ಕೆ ಆಸ್ಪದ ಆಗುತ್ತಿರಲಿಲ್ಲ’ ಎಂದು ಕೆಲವು ವೈದ್ಯಕೀಯ ಸಿಬ್ಬಂದಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಈ ಬಗ್ಗೆ ‘‍ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಡಿಎಚ್‌ಇ ಡಾ.ಎಸ್.ವಿ. ಮುನ್ಯಾಳ, ‘ಸರ್ಕಾರದ ಮಾರ್ಗಸೂಚಿ ಈಚೆಗೆ ಬದಲಾಗಿದೆ. ಹೀಗಾಗಿ, ಮನೆಯಿಂದಲೇ ಬಂದು ಕೆಲಸ ಮಾಡಬಹುದು ಎಂದು ಸೂಚಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಅವರು ಪಿಪಿಇ ಕಿಟ್‌ ಧರಿಸಿ ಕೆಲಸ ಮಾಡುತ್ತಾರೆ. ಹೀಗಾಗಿ ಅವರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಹಾಗೊಂದು ವೇಳೆ ಸೋಂಕಿನ ಲಕ್ಷಣ ಕಂಡುಬಂದರೆ ಪರೀಕ್ಷೆಗೆ ಒಳಪಡಿಸಲಾಗುತ್ತದೆ’ ಎಂದು ತಿಳಿಸಿದರು.

‘ನಗರದಲ್ಲಿರುವವರು ಮನೆಗಳಿಗೆ ಹೋಗುತ್ತಾರೆ. ಹೊರಗಿನವರಿಗೆ ಬಿಮ್ಸ್‌ ಆವರಣದ ತರಬೇತಿ ಕೇಂದ್ರದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ನಗರಪಾಲಿಕೆಯಿಂದ ಆಹಾರ ಪೂರೈಸಲಾಗುತ್ತಿದೆ. ಅವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT