ಬೆಳಗಾವಿ: ‘ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿ ಕೃಷಿ– ತೋಟಗಾರಿಕೆ ಬೆಳೆಗಳು ಹಾನಿಯಾಗಿದೆ. ಈ ಕುರಿತು ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಜಂಟಿ ಸಮೀಕ್ಷೆ ಜರುಗಿಸಿ ಬೆಳೆ ಹಾನಿ ವರದಿಯನ್ನು ಮಾಸಂತ್ಯದೊಳಗೆ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿನ ಶಿಥಿಲಾವಸ್ಥೆಯಲ್ಲಿರುವ ಮನೆಗಳ ಸಮೀಕ್ಷೆ ಜರುಗಿಸಿ ಸಮೀಕ್ಷಾ ವರದಿಯನ್ನು ತ್ವರಿತವಾಗಿ ಒದಗಿಸಬೇಕು. ಅಲ್ಲದೇ ಶೀಥಿಲಾವಸ್ಥೆ ಮನೆಯಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲು’ ತಿಳಿಸಿದರು.

‘ಗ್ರಾಮ ಪಂಚಾಯಿತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಂಬಂಧಿಸಿದ ಅಧಿಕಾರಿಗಳು ಕೂಡ ಈ ವರದಿಯನ್ನು ಅದಷ್ಟು ಬೇಗ ನೀಡಬೇಕು. ಬಿಸಿಲಿನ ತಾಪಮಾನ ಹೆಚ್ಚಿರುವ ಕಾರಣ ಜಿಲ್ಲೆಯ ಅಗತ್ಯವಿರುವ ಕಡೆಯಲ್ಲಿ ಕುಡಿಯುವ ನೀರು ಸಮರ್ಪಕ ಪೂರೈಕೆಯಾಗುವಂತೆ ನಿಗಾವಹಿಸಬೇಕು’ ಎಂದೂ ಸೂಚಿಸಿದರು.

‘ಅಗತ್ಯ ಸ್ಥಳಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. ಪ್ರತಿ ವಾರಕ್ಕೆ ಒಂದು ಬಾರಿ ಮಳೆಯಾಗುತ್ತಿರುವ ಕಾರಣ ಕುಡಿಯುವ ನೀರಿನ ಸಮಸ್ಯೆ ಅಷ್ಟೊಂದು ಕೇಳಿ ಬರುತ್ತಿಲ್ಲ ಒಂದು ವೇಳೆ ಸಮಸ್ಯೆ ಎದುರಾದಲ್ಲಿ ಕೂಡಲೇ ನೀರು ಪೂರೈಕೆ ಕ್ರಮ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಹೇಳಿದರು.

‘ಮಳೆಯ ವೇಗ, ಗಾಳಿ ಹೆಚ್ಚಿರುವ ಕಾರಣ ಸಿಡಿಲು ಬರುವ ಸಾಧ್ಯತೆಗಳಿದ್ದು ಸಿಡಿಲಿನಿಂದಾಗಬಹುದಾದ ಸಂಭವನೀಯ ಅನಾಹುತಗಳನ್ನು ತಪ್ಪಿಸಲು ಗ್ರಾಮ ಪಂಚಾಯಿತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎಚ್ಚರಿಕಾ ಕ್ರಮಗಳ ಕುರಿತು ಜಾಗೃತಿ ಮೂಡಿಸಲು’ ಮೊಹಮ್ಮದ್ ರೋಷನ್ ಅವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಾಹುಲ್ ಶಿಂಧೆ ಮಾತನಾಡಿ, ‘ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುವುದು. ಪ್ರತಿ ಪಂಚಾಯಿತಿಗಳಿಗೆ ಟ್ಯಾಂಕರ್ಗಳನ್ನು ಈಗಾಗಲೇ ಖರೀದಿ ಮಾಡಲಾಗಿದೆ. ಕುಡಿಯುವ ನೀರಿನ ಪೂರೈಕೆಗೆ ಯಾವುದೇ ರೀತಿಯ ಅನುದಾನದ ಕೊರತೆ ಇರುವುದಿಲ್ಲ’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ. ಬಸರಗಿ, ಮಹಾನಗರ ಪಾಲಿಕೆ ಆಯುಕ್ತ ಎಂ. ಕಾರ್ತಿಕ್,ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಜಿಲ್ಲಾ ಪಂಚಾಯಿತ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಜಿಲ್ಲಾ ಆರೋಗ್ಯಾಧಿಕಾರಿ ಈಶ್ವರ ಗಡಾದಿ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಮಹಾಂತೇಶ ಮುರಗೋಡ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-21-1306994687

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.