ಸೋಮವಾರ, ಮೇ 23, 2022
24 °C

 ಸುರಕ್ಷಿತ ಸ್ಥಳಕ್ಕೆ ತೆರಳಲು ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ನ.25ರವರೆಗೆ ಅತಿವೃಷ್ಟಿಯಾಗುವುದಾಗಿ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೋಶವು ಮುನ್ಸೂಚನೆ ನೀಡಿದೆ. ಆದ್ದರಿಂದ, ನದಿ ಪಾತ್ರಗಳಲ್ಲಿರುವ ಜನರು ತಮ್ಮ ಅಗತ್ಯ ಸಾಮಗ್ರಿಗಳು ಮತ್ತು ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳಬೇಕು’ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ತಿಳಿಸಿದ್ದಾರೆ.

‘ಜನರು ಮತ್ತು ಜಾನುವಾರುಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಲ್ಲಿ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ನೀಡಲಾಗುವುದು. ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ತೆಗೆದುಕೊಳ್ಳುವ ಎಲ್ಲ ಕ್ರಮಗಳಿಗೆ ಸಾರ್ವಜನಿಕರು ಸಹಕರಿಸಬೇಕು’ ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.