ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಕಾಳಜಿ ಕೇಂದ್ರಕ್ಕೆ ರಾತ್ರಿಯೇ ಭೇಟಿ ನೀಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ

Last Updated 8 ಆಗಸ್ಟ್ 2022, 18:08 IST
ಅಕ್ಷರ ಗಾತ್ರ

ಬೆಳಗಾವಿ: ನಗರದಲ್ಲಿ ಅತಿವೃಷ್ಟಿ ಹಿನ್ನೆಲೆಯಲ್ಲಿ ಕೆಲವು ಮನೆಗಳಿಗೆ ನೀರು ನುಗ್ಗಿರುವುದರಿಂದ ಅಂತಹ ಕುಟುಂಬಗಳಿಗೆ ನಗರದ ಮಂಡೋಳಿ ರಸ್ತೆಯ ಕೈವಲ್ಯ ಯೋಗ ಮಂದಿರದಲ್ಲಿ ಕಾಳಜಿ ಕೇಂದ್ರ ಆರಂಭಿಸಲಾಗಿದೆ.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೋಮವಾರ ರಾತ್ರಿಯೇ ಈ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲಿಸಿದರು.

ಈ ಕಾಳಜಿ ಕೇಂದ್ರದಲ್ಲಿ 15 ಜನ ಆಶ್ರಯ ಪಡೆದುಕೊಂಡಿದ್ದಾರೆ. ಅವರಿಗೆ ಊಟ ಹಾಗೂ ವಸತಿ ವ್ಯವಸ್ಥೆ ಮಾಡಲಾಗಿದೆ‌.

ಮಹಿಳೆಯರು ಮತ್ತು ಮಕ್ಕಳು ಇರುವುದರಿಂದ ವೈದ್ಯಕೀಯ ತಂಡವನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮನೆಗೆ ನೀರು ನುಗ್ಗಿರುವ ಕುಟುಂಬಗಳಿಗೆ ಪರಿಹಾರವನ್ನು ನೀಡಲಾಗಿದೆ. ಕೆಲವು ಕುಟುಂಬಗಳಿಗೆ ಸಂಬಂಧಿಸಿದಂತೆ ದಾಖಲೆಗಳು ದೊರಕದಿರುವುದರಿಂದ ಪರಿಹಾರ ವಿಳಂಬವಾಗಿದೆ. ಅವರಿಗೂ ನಾಳೆಯೇ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಪಾಲಿಕೆಯ ಆಯುಕ್ತ ಡಾ.ರುದ್ರೇಶ್ ಘಾಳಿ, ಉಪ ಆಯುಕ್ತರಾದ ಭಾಗ್ಯಶ್ರೀ ಹುಗ್ಗಿ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT