ಗುರುವಾರ , ನವೆಂಬರ್ 26, 2020
19 °C

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: 3 ನಾಮಪತ್ರ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿ ನ. 6ರಂದು ನಡೆಯಲಿರುವ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ) ಆಡಳಿತ ಮಂಡಳಿ ಚುನಾವಣೆಗೆ ಈವರೆಗೆ ಮೂವರು ನಾಮಪತ್ರ ಸಲ್ಲಿಸಿದ್ದಾರೆ.

‘ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ರಾಮದುರ್ಗ ಪಿಕೆಪಿಎಸ್‌ನ ಶ್ರೀಕಾಂತ ಢವಣ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ನೇಕಾರ ಸಹಕಾರ ಸಂಘಗಳ ಕ್ಷೇತ್ರದಿಂದ ತಾಲ್ಲೂಕಿನ ಶಿಂದೊಳ್ಳಿಯ ಕೃಷ್ಣ ರಾಮನಿಂಗ ಅನಗೋಳಕರ ಮತ್ತು ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಬೈಲಹೊಂಗಲ ತಾಲ್ಲೂಕು ತಿಗಡಿಯ ಆನಂದ ಜಗದೀಶ ಜಕಾತಿ ಎನ್ನುವವರು ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ’ ಎಂದು ಚುನಾವಣಾಧಿಕಾರಿ ಸಯೀದಾ ಅಫ್ರೀನಬಾನು ಎಸ್. ಬಳ್ಳಾರಿ ತಿಳಿಸಿದ್ದಾರೆ.

ಉಮೇದುವಾರಿಕೆ ಸಲ್ಲಿಸಲು ಅ.29ರವರೆಗೂ ಅವಕಾಶವಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.