ಬೆಳಗಾವಿ: ತಾಲ್ಲೂಕಿನ ಧಾಮಣೆ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ‘ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದ ಅನುದಾನದಲ್ಲಿ ಪುನಃಶ್ಚೇತನಗೊಳ್ಳಲಿರುವ ಗಣೇಶ ಕೆರೆ ಹೂಳೆತ್ತುವ ಕಾಮಗಾರಿಗೆ ಕೆರೆ ಸಮಿತಿ ಅಧ್ಯಕ್ಷ ಮಹಾದೇವ ಚೌಗಲೆ ಭೂಮಿಪೂಜೆ ನೆರವೇರಿಸಿದರು.

ತಾಲ್ಲೂಕು ಯೋಜನಾಧಿಕಾರಿ ಪಾರ್ವತಿ ಮಾತನಾಡಿ, ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ದೇವಸ್ಥಾನ ಜೀರ್ಣೋದ್ಧಾರ, ಸಮುದಾಯ ಭವನ ಕಟ್ಟಡಗಳಿಗೆ ಅನುದಾನ, ಸರ್ಕಾರಿ ಶಾಲೆಗಳಿಗೆ ಡೆಸ್ಕ್ ಬೆಂಚು ವಿತರಣೆ, ವೃತ್ತಿಪರ ಶಿಕ್ಷಣಕ್ಕೆ ವಿದ್ಯಾರ್ಥಿನಿಯರಿಗೆ ಶಿಷ್ಯವೇತನ, ರುದ್ರಭೂಮಿ ಅನುದಾನ, ಜನಮಂಗಲ ಕಾರ್ಯಕ್ರಮ, ನಿರ್ಗತಿಕರಿಗೆ ಮಾಸಾಶನ ವಿತರಣೆ ಸೇರಿದಂತೆ ಹಲವಾರು ಕಾರ್ಯಕ್ರಮಗಳ ಜೊತೆಗೆ, ನಮ್ಮೂರು ನಮ್ಮ ಕೆರೆ ಕಾರ್ಯಕ್ರಮವು ಅತೀ ಪ್ರಮುಖವಾಗಿದೆ’ ಎಂದರು.

ಧಾರವಾಡ ಪ್ರಾದೇಶಿಕ ವಿಭಾಗದ ಕೆರೆ ಎಂಜಿನಿಯರ್ ನಿಂಗರಾಜ ಮಾತನಾಡಿದರು. ತಲಾಟಿ ಸಿದ್ದು, ಆನಂದ ಜಯಾನಾಚೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-21-930146191

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.