ಬುಧವಾರ, ನವೆಂಬರ್ 25, 2020
25 °C

ಜಿಲ್ಲಾಸ್ಪತ್ರೆ ಸಾರ್ವಜನಿಕ ಸೇವೆಗೆ ಲಭ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಕೊರೊನಾ ವೈರಾಣು ಕಾಣಿಸಿಕೊಂಡ ನಂತರ ‘ಕೋವಿಡ್-19 ನಿಗದಿತ ಆಸ್ಪತ್ರೆ’ಯಾಗಿ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲಾ ಆಸ್ಪತ್ರೆಯಲ್ಲಿ ಹಿಂದಿನಂತೆ ಹೊರ ರೋಗಿಗಳ ವಿಭಾಗ ಹಾಗೂ ಇತರ ಎಲ್ಲ ಆರೋಗ್ಯ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

ಈ ಬಗ್ಗೆ ಮಂಗಳವಾರ ಪ್ರಕಟಣೆ ನೀಡಿರುವ ಅವರು, ‘ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ವೇಳೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಜಿಲ್ಲಾ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಘೋಷಿಸಲಾಗಿತ್ತು. ಇತ್ತೀಚೆಗೆ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳಲ್ಲಿ ಗಣನೀಯ ಇಳಿಮುಖವಾಗಿದೆ. ಆದ್ದರಿಂದ ಜಿಲ್ಲಾ ಆಸ್ಪತ್ರೆಯನ್ನು ಇತರ ಕಾಯಿಲೆಗಳ ಚಿಕಿತ್ಸೆಗೂ ಮುಕ್ತಗೊಳಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಆಸ್ಪತ್ರೆಯ ಒಂದು ವಿಭಾಗವನ್ನು ಕೋವಿಡ್-19 ಚಿಕಿತ್ಸೆಗೆ ಮೀಸಲಿಡಲಾಗಿದೆ. ಉಳಿದ ವಿಭಾಗಗಳಲ್ಲಿ ಮೊದಲಿನಂತೆ ಸಾರ್ವಜನಿಕರಿಗೆ ವೈದ್ಯಕೀಯ ಸೇವೆ ಲಭ್ಯವಾಗಲಿದೆ. ಸೌಲಭ್ಯಗಳನ್ನು ಬಳಸಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು