ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರತಿಭೆ ಬಳಸಿಕೊಂಡು ಮುಂದೆ ಬನ್ನಿ’

Last Updated 29 ಡಿಸೆಂಬರ್ 2020, 13:02 IST
ಅಕ್ಷರ ಗಾತ್ರ

ಬೆಳಗಾವಿ: ‘ಕಲೆ ಮತ್ತು ಪ್ರತಿಭೆ ಎಲ್ಲರಲ್ಲಿಯೂ ಇದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಶಾಲೆ ಅಥವಾ ಜಿಲ್ಲೆಗೆ ಮಾತ್ರ ಕಲೆ ಸೀಮಿತವಾಗಬಾರದು. ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ದರ್ಶನ್ ಎಚ್.ವಿ. ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರೂ ಯುವ ಕೇಂದ್ರದ ವತಿಯಿಂದ ಇಲ್ಲಿನ ಮಹಾಂತ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

‘ಸ್ಪರ್ಧಾ ಕಾರ್ಯಕ್ರಮಗಳ ವೇದಿಕೆಯನ್ನು ಸದುಪಯೋಗಪಡಿಸಿಕೊಳ್ಳಬೇಕು. ಸಮಾಜ ಬೆಳವಣಿಗೆ ಹೊಂದಲು ವಿದ್ಯೆ, ಬುದ್ಧಿ, ಸಂಸ್ಕೃತಿ ಮತ್ತು ಕ್ರೀಡೆ ಬಹಳ ಮುಖ್ಯವಾಗಿದೆ. ಇದರ ಜೊತೆಗೆ ಉತ್ತಮ ಆರೋಗ್ಯ ಮತ್ತು ಧನಾತ್ಮಕ ವಾತಾವರಣ ಸೃಷ್ಟಿ ಮಾಡಲು ಸಹಾಯವಾಗುತ್ತದೆ’ ಎಂದರು.

ಅಂತರರಾಷ್ಟ್ರೀಯ ಕುಸ್ತಿಪಟು ರತನಕುಮಾರ್ ಮಠಪತಿ, ‘ಕ್ರೀಡಾ ಸ್ಪರ್ಧಿಗಳಿಗೆ ಉತ್ತಮ ಆರೋಗ್ಯವೇ ಅಡಿಪಾಯ. ಗುರಿಯ ಜೊತೆಗೆ ಆರೋಗ್ಯದ ಬಗ್ಗೆ ಗಮನವಿರಬೇಕು’ ಎಂದು ಸಲಹೆ ನೀಡಿದರು.

ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತ ಮಲ್ಲೇಶ ಚೌಗಲೆ, ಭರತ್ ಕಲಾಚಂದ್ರ ಮರಾಠೆ, ಸಿದ್ದಣ್ಣ ದುರದುಂಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಎಚ್.ಡಿ. ಕೋಳೇಕರ ಇದ್ದರು.

ನಂತರ ಯುವಕ, ಯುವತಿಯರಿಗೆ ಪ್ರತ್ಯೇಕವಾಗಿ ವಿವಿಧ ಸ್ಪರ್ಧೆಗಳು ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT